Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸೇನಾ ಟ್ರಕ್ ಪಲ್ಟಿಯಾಗಿ ಅಪಘಾತ :ಕೋಟೇಶ್ವರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ..!!

Dhrishya News by Dhrishya News
25/12/2024
in मौसम
0
0
SHARES
55
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 25: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು.

ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಒಬ್ಬ ಯೋಧನನ್ನು ಕುಂದಾಪುರ ಬೀಜಾಡಿಯ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ 18 ಯೋಧರು ಪ್ರಯಾಣಿಸುತ್ತಿದ್ದ ಟ್ರಕ್ ಇಕ್ಕಟ್ಟಾದ ರಸ್ತೆಯಿಂದ ಕಣಿವೆಗೆ ಉರುಳಿದೆ. ಅಪಘಾತದಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಅನೂಪ್ 13 ವರ್ಷಗಳ ಹಿಂದೆ ಸೇನೆಗೆ ಸೇರ್ಪಡೆಗೊಂಡಿದ್ದರು. ಪ್ರಸ್ತುತ ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಘೊಂಡಿದ್ದಲ್ಲದೆ ಮಗಳ ಹುಟ್ಟುಹಬ್ಬವನ್ನು ಆಚರಿಸಿ ಬಳಿಕ ಸೇನೆಗೆ ಹಿಂತಿರುಗಿದ್ದರು. ಅನೂಪ್ ಜೊತೆಗಿದ್ದ ಸ್ನೇಹಿತ ಯೋಧ ಆಂಜನೇಯ ಪಾಟೀಲ್ ತನ್ನ ಸಹೋದರ ನೊಂದಿಗೆ ತಡರಾತ್ರಿ ಹೊರಟು ಬಂದು ಬೆಳಿಗ್ಗೆ ಮೃತ ಯೋಧನ ಮನೆಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಿತವಾಗಿರುವ ಅನೂಪ್ ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅನೂಪ್ ಅವರು ಪತ್ನಿ, ತಾಯಿ, ಇಬ್ಬರು ಸಹೋದರಿಯರು, ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ನಾಳೆ (ಗುರುವಾರ) ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ರಾಮಸ್ಥರ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ.

Previous Post

ಉಡುಪಿ :ಯುವನಿಧಿ ಯೋಜನೆ2024ರ ನೋಂದಣಿಗಾಗಿ ಪ್ರಕ್ರಿಯೆ ಆರಂಭ..!!

Next Post

ನಂದಿನಿ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಂದಿನಿ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved