Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ :ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ-ಸುಶಾಸನ ದಿನಾಚರಣೆ..!!

Dhrishya News by Dhrishya News
27/12/2024
in मौसम
0
0
SHARES
10
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 27:ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ದಿನ ಹಾಗೂ ಸುಶಾಸನ ದಿನವನ್ನು ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ದೇಶ ಕಂಡ ಅಪ್ರತಿಮ ನಾಯಕ, ಅಜಾತಶತ್ರು, ಕವಿ ಹೃದಯದ ಅಟಲ್ ಬಿಹಾರಿ ವಾಜಪೇಯಿ ಅವರ ಮೌಲ್ಯಾಧಾರಿತ ರಾಜಕಾರಣ, ಮುತ್ಸದ್ದಿತನ, ಸುವರ್ಣ ಚತುಷ್ಪಥ ಯೋಜನೆಯಂತಹ ದೂರದರ್ಶಿತ್ವದ ಚಿಂತನೆಗಳು, ರಾಷ್ಟ್ರ ಪ್ರೇಮ ಸರ್ವಕಾಲಿಕ ಮಾದರಿಯಾಗಿದೆ. ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ. ವಾಜಪೇಯಿ ಅವರ ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದರು.

ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯೆ ಶಾಮಲಾ ಎಸ್. ಕುಂದರ್ ಮಾತನಾಡಿ, ದೇಶದ ಲೋಕತಂತ್ರ ಸದೃಢವಾಗಿರಬೇಕು, ದೇಶದ ಒಳಿತಿಗಾಗಿ ಎಂತಹ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂಬ ಗಟ್ಟಿ ನಿಲುವು ಹೊಂದಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ದೇಶ ಭಕ್ತಿ, ತ್ಯಾಗ ಮನೋಭಾವ, ಸರಳತೆ ಹಾಗೂ ಮೇರು ವ್ಯಕ್ತಿತ್ವ ಎಲ್ಲರಿಗೂ ಆದರ್ಶ ಎಂದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಡುಪಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಪ್ರಮುಖರಾದ ರವಿ ಅಮೀನ್, ರಾಘವೇಂದ್ರ ಕುಂದರ್, ಶ್ರೀನಿಧಿ ಹೆಗ್ಡೆ, ರಾಘವೇಂದ್ರ ಉಪ್ಪುರು ಸಹಿತ ಬಿಜೆಪಿ ಜಿಲ್ಲಾ ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳು, ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಅನಿತಾ ಆರ್.ಕೆ. ವಂದಿಸಿದರು.

Previous Post

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ : ಇಂದು ಶಾಲಾ ಕಾಲೇಜುಗಳಿಗೆ ರಜೆ ..!!

Next Post

ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಆಚರಣೆ : ಸಾಧಕರಿಗೆ ಸನ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಆಚರಣೆ : ಸಾಧಕರಿಗೆ ಸನ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News