Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಯಶಸ್ವಿಯಾಗಿ ಮುಕ್ತಾಯ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು 2025 ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL 2025) ಕ್ವೆಸ್ ಕಾರ್ಪ್ ಟ್ರೋಫಿಯನ್ನು ಗೆದ್ದುಕೊಂಡಿತು

Dhrishya News by Dhrishya News
19/01/2025
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಮಣಿಪಾಲ, 19 ಜನವರಿ 2024: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ರೋಮಾಂಚನಕಾರಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL 2025) ಯಶಸ್ವಿಯಾಗಿ ಮುಕ್ತಾಯಗೊಳಿಸಿತು. 2025 ರ ಜನವರಿ 17ರಂದು ಪ್ರಾರಂಭವಾದ ಪಂದ್ಯಾವಳಿಯು ಭಾಗವಹಿಸಿದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು.

ಅಂತಿಮ ದಿನದಂದು ನಡೆದ ಸಮಾರೋಪ ಸಮಾರಂಭವು ಗಣ್ಯರ ಉಪಸ್ಥಿತಿಯಿಂದ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ ಆನಂದ್ ವೇಣುಗೋಪಾಲ್ , ಸಿ ಓ ಓ ಬೋಧನಾ ಆಸ್ಪತ್ರೆ, ಮಾಹೆ, ಮಣಿಪಾಲ, ಭಾಗವಹಿಸಿದ್ದರು. ಇವರೊಂದಿಗೆ, ಡಾ ಪದ್ಮರಾಜ್ ಹೆಗ್ಡೆ ಡೀನ್-ಕೆ ಎಂ ಸಿ ಮಣಿಪಾಲ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಮತ್ತು ಅದಾನಿ ಪವರ್ ಲಿ ನ ಸ್ಟೇಷನ್ ಹೆಡ್ ಶ್ರೀ ಶ್ರೀಧರ್ ಗಣೇಶನ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ ಅವಿನಾಶ್ ಶೆಟ್ಟಿ ಪಂದ್ಯಾವಳಿಯಲ್ಲಿ ತೋರಿದ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ಅವರು ಮಾತನಾಡುತ್ತಾ ಸಮುದಾಯದ ಸಂಬಂಧ ಗಟ್ಟಿ ಗೊಳಿಸುವಲ್ಲಿ ಹಾಗೂ ಬೆಳೆಸುವಲ್ಲಿ ಮತ್ತು ಬಲವಾದ ಕಾರ್ಪೊರೇಟ್ ನೆಟ್‌ವರ್ಕ್‌ಗಳನ್ನು ನಿರ್ಮಿಸುವಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರವನ್ನು ಒತ್ತಿ ಹೇಳಿದರು.

ಪ್ರತಿಷ್ಠಿತ ಕಸ್ತೂರ್ಬಾ ಹಾಸ್ಪಿಟಲ್ ಕ್ರಿಕೆಟ್ ಲೀಗ್ (KH-CCL 2025) ಟ್ರೋಫಿಯನ್ನು ಕ್ವೆಸ್ ಕಾರ್ಪ್ ಮಣಿಪಾಲದ ತಂಡ ಪಡೆದುಕೊಂಡಿತು, ಅದಾನಿ ಪವೆರ್ ಲಿ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು. ಸಮಾರಂಭದಲ್ಲಿ ವೈಯಕ್ತಿಕ ಪ್ರಶಸ್ತಿಗಳನ್ನು ಸಹ ನೀಡಿ ಗೌರವಿಸಲಾಯಿತು , ಶ್ರೀ ಗಣೇಶ್ ಸರಣಿ ಶ್ರೇಷ್ಠ ಗೌರವವನ್ನು ಸ್ವೀಕರಿಸಿದರು. , ಶ್ರೀ ಸುಕೇಶ್ ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಗುರುತಿಸಲ್ಪಟ್ಟರು ಮತ್ತು ಶ್ರೀ ಜಾಯ್ ಅಸಾಧಾರಣ ಬೌಲಿಂಗ್ ಕೌಶಲ್ಯಕ್ಕಾಗಿ ಪ್ರಶಸ್ತಿಗಳನ್ನು ಪಡೆದರು.

ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್, ಜಿಬು ಥಾಮಸ್ , ಮೋಹನ್ ಶೆಟ್ಟಿ, ಕೃಷ್ಣ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇಂದು ಬೆಳಿಗ್ಗೆ ಕಸ್ತೂರ್ಬಾ ಆಸ್ಪತ್ರೆ ವೈದ್ಯರು ಮತ್ತು ಪಂದ್ಯ ಸಂಘಟಕರ ನಡುವೆ ಪ್ರದರ್ಶನ ಪಂದ್ಯ ನಡೆಯಿತು

ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL 2024) ಕಾರ್ಪೊರೇಟ್ ಪ್ರಪಂಚದ ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಿತು ಮಾತ್ರವಲ್ಲದೆ ಸೌಹಾರ್ದತೆಯನ್ನು ಬೆಳೆಸಲು ಮತ್ತು ಸಮುದಾಯದೊಳಗೆ ಸಂಬಂಧಗಳನ್ನು ಬಲಪಡಿಸಲು ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಭವಿಷ್ಯದಲ್ಲಿ ಈ ಪ್ರದೇಶದಲ್ಲಿ ಆರೋಗ್ಯ ಮತ್ತು ಕ್ರೀಡೆ ಎರಡನ್ನೂ ಉತ್ತೇಜಿಸುವ ಇಂತಹ ಇನ್ನಷ್ಟು ಯಶಸ್ವಿ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದೆ.

Previous Post

ಮಣಿಪಾಲದ ಕೆ.ಎಂ.ಸಿ.ಯಲ್ಲಿ ಗುರಿ-ನಿರ್ದೇಶಿತ ರಕ್ತಸ್ರಾವ ನಿರ್ವಹಣೆ (ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ )ಕುರಿತು ವಿಚಾರ ಸಂಕಿರಣ..!!

Next Post

ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ  ಸಿಲಿಂಡರ್​​ಗಳು ಸ್ಫೋಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ  ಸಿಲಿಂಡರ್​​ಗಳು ಸ್ಫೋಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News