ಉಡುಪಿ:ಜನವರಿ 22:ಕುಂಜಿಬೆಟ್ಟಿನ ಶಾರದಾ ಕಲ್ಯಾಣ ಮಂಟಪದ ವ್ಯವಸ್ಥಾಪಕ, ಬೈಲೂರು ಮಹಿಷಾಮರ್ಧಿನಿ ದೇವಸ್ಥಾನ ಬಳಿಯ ನಿವಾಸಿ ಅಜಿತ್ ರಾವ್(43) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ಇವರು ಇಂದು ಸಂಜೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು ಎನ್ನಲಾಗಿದ್ದು ಕೂಡಲೇ ಆಟೋ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದರು ಆದರೆ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ
ಮೃತರು ತಾಯಿ, ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.