ಉಡುಪಿ : ಜನವರಿ 24:ಉಡುಪಿ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ 2025 ಇದರ ಸಮಾರೋಪ ಸಮಾರಂಭ ಸಂಪನ್ನ ಗೊಂಡಿತು
ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಗುರುರಾಜ ಗಂಟಿಹೊಳೆ, ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.








