Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ: ಜಿಲ್ಲಾ ಶ್ರೀ ವಿಶ್ವಕರ್ಮ ಎಜುಕೇಶನಲ್ ಟ್ರಸ್ಟ್ ವತಿಯಿಂದ ಫೆ.9ರಂದು ವಿದ್ಯಾರ್ಥಿವೇತನ ವಿತರಣೆ..!!

Dhrishya News by Dhrishya News
06/02/2025
in ಉದ್ಯೋಗ/ಶಿಕ್ಷಣ
0
0
SHARES
21
VIEWS
Share on FacebookShare on Twitter

ಉಡುಪಿ:ಫೆಬ್ರವರಿ 06: 2024-25ನೇ ಸಾಲಿನಲ್ಲಿ 205 ವಿದ್ಯಾರ್ಥಿಗಳಿಗೆ 9.15 ಲ.ರೂ. ವಿದ್ಯಾರ್ಥಿವೇತನವನ್ನು ಜಿಲ್ಲಾ ಶ್ರೀ ವಿಶ್ವಕರ್ಮ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿತರಿಸಲಾಗುವುದು 

ಫೆ.9ರಂದು ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಬೆಳಗ್ಗೆ 10ಕ್ಕೆ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತಸರ ಗಣೇಶ್ ಆಚಾರ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಧಾರವಾಡ ವಿ.ವಿ. ನಿವೃತ್ತ ಪ್ರಾಧ್ಯಾಪಕ ಡಾ| ಈರಣ್ಣ ಪತ್ತಾರ್ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಬಿ.ಎ. ಆಚಾರ್ಯ ಮಣಿಪಾಲ ತಿಳಿಸಿದ್ದಾರೆ 

ಖಾಯಂ ಟ್ರಸ್ಟಿ ಬಿ. ಪ್ರಕಾಶ್ ಆಚಾರ್ಯ ಕಾರ್ಕಳ, ಉಡುಪಿಯ ಆ‌ ವಿಎಸ್ ಸಂಘದ ಅಧ್ಯಕ್ಷ ವೆಂಕಟೇಶ ಆಚಾರ್ಯ, ಹುಬ್ಬಳ್ಳಿಯ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿಯ ಮುಖ್ಯಸ್ಥ ಭೀಮಸೇನ ಬಡಿಗೇರ ಭಾಗವಹಿಸಲಿದ್ದಾರೆ. ಈ ಬಾರಿ ಮೂಡಿಗೆರೆ ಮೂಲದ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿ ಪುಷ್ಪಾಗೌಡ ಅವರಿಗೆ 2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಮಂಗಳೂರು ವಿ.ವಿ.ಯ 2022-23ನೇ ಸಾಲಿನಲ್ಲಿ ಎಂ.ಕಾಂ. ಪರೀಕ್ಷೆಯಲ್ಲಿ ದ್ವಿತೀಯ ಬ್ಯಾಂಕ್ ಗಳಿಸಿರುವ ಪ್ರೀತಿ ಎಂ. ಅಂಬಲಪಾಡಿಯನ್ನು ಗೌರವಿಸಲಾಗುವುದು ಎಂದರು.

ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಕೃಷಿ ವಿಜ್ಞಾನಿಯಾಗಿರುವ ಡಾ| ಸದಾನಂದ ಆಚಾರ್ಯ ಬೈಕಾಡಿ, ಪೂರ್ಣಪ್ರಜ್ಞ ಸಂಧ್ಯಾ

ಕಾಲೇಜಿನಲ್ಲಿ ಸಮಾಜಶಾಸ್ತ್ರದ ಪ್ರಾಧ್ಯಾಪಕರಾಗಿರುವ ಡಾ| ರಾಘವೇಂದ್ರ ಆಚಾರ್ಯ ಹಾಗೂ ನಿಟ್ಟೆ ವಿ.ವಿ. ಜೀವ ರಸಾಯನಶಾಸ್ತ್ರ ವಿಭಾಗದಲ್ಲಿ ಸಂಶೋಧಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ| ರಂಜಿತಾ ಮಂಗಳೂರು ಅವರನ್ನು ಗೌರವಿಸಲಾಗುವುದು. ಟ್ರಸ್ಟ್ ಫಲಾನುಭವಿಯಾಗಿದ್ದು ಉನ್ನತ ಹುದ್ದೆಯಲ್ಲಿರುವ ಲಕ್ಷ್ಮೀ ಆಚಾರ್ಯ ಕೆ. ಹಾಗೂ ಯೋಗೀಶ್ ಕುಮಾರ್ ಶುಭಾಶಂಸನೆಗೈಯಲಿದ್ದಾರೆ ಎಂದರು.

ಅಪರಾಹ್ನ 2:30ಕ್ಕೆ ಟ್ರಸ್ಟ್ ಪೋಷಕರ ಸಮಾವೇಶ ಜರಗಲಿದೆ. ಜಿಲ್ಲಾ ಕಾರ್ಪೆಂಟರ್ ಅಸೋಸಿಯೇಶನ್ ಅಧ್ಯಕ್ಷ ಅಚ್ಯುತ ಆಚಾರ್ಯ ಮಧ್ವನಗರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಡುಪಿಯ ವಿಶ್ವಬ್ರಾಹ್ಮಣ ಯುವಕ ಸೇವಾದಳದ ಅಧ್ಯಕ್ಷ ಪಿ.ವಿ. ನಾಗರಾಜ ಆಚಾರ್ಯ ಹಾಗೂ ಗಾಯತ್ರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಮುಕ್ತಾ ಜಗದೀಶ್‌ ಭಾಗವಹಿಸಲಿದ್ದಾರೆ 

ಚಿತ್ರಕಲಾವಿದರಾದ ಮಹೇಶ್ ಆಚಾರ್ಯ ಮರ್ಣೆಯವರ ಕಲಾಕೃತಿಗಳ ಪ್ರದರ್ಶನದ ವ್ಯವಸ್ಥೆ ಮಾಡಲಾಗಿದೆ. ಮಂಗಳೂರಿನ ಮಹಾಲಸಾ ಕಲಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ| ಎನ್.ಎಸ್. ಪತ್ತಾರ್ ಮಂಗಳೂರು ಚಿತ್ರಕಲಾ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10.30ರಿಂದ ಅಪರಾಹ್ನ 3.30ರ ತನಕ ಚಿತ್ರಕಲಾ ಪ್ರದರ್ಶನ ವೀಕ್ಷಿಸಲು ಅವಕಾಶ ನೀಡಲಾಗುವುದು ಎಂದರು. 

Previous Post

ಕುಂದಾಪುರ :ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಯುವಕ ಸಾವು..!!

Next Post

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ  ಮರಕ್ಕೆ ಢಿಕ್ಕಿ ಹೊಡೆದ ಕಾರು :ಓರ್ವ ಮಹಿಳೆ ಸಾವು ಹಲವರಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ  ಮರಕ್ಕೆ ಢಿಕ್ಕಿ ಹೊಡೆದ ಕಾರು :ಓರ್ವ ಮಹಿಳೆ ಸಾವು ಹಲವರಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News