ಉಡುಪಿ, ಫೆಬ್ರವರಿ .14: ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರಕಾರ 2022ರ ಮೇ10ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ನೀಡಲಾದ ಮಾರ್ಗದರ್ಶನಗಳನ್ನು ಸರಿಯಾಗಿ ಕಾರ್ಯಗತಗೊಳಿಸಲು ಹಾಗೂ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿ ಪಡಿಸಿದ ಅವಧಿಯೊಳಗೆ ಸಮಾರಂಭವನ್ನು ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಗಳು ಮನವಿ ಮಾಡಿದ್ದಾರೆ.
ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭ ವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತ ವಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಜಾರಿ ಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ