Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನದ ಆಚರಣೆ..!!

Dhrishya News by Dhrishya News
15/02/2025
in ಆರೋಗ್ಯ
0
0
SHARES
15
VIEWS
Share on FacebookShare on Twitter

ಮಣಿಪಾಲ, 15 ಫೆಬ್ರವರಿ, 2025: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಅರ್ಥಪೂರ್ಣವಾಗಿ ಆಚರಿಸಿತು, ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್ ನಿಂದ ಗಣಮುಖರಾದವರು ಬಾಲ್ಯದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಮತ್ತು ಬೆಂಬಲವನ್ನು ತೋರಿಸಲು ಒಗ್ಗೂಡಿದರು. ಈ ಕಾರ್ಯಕ್ರಮವು “ಪ್ರೇರೇಪಿಸುವ ಕ್ರಿಯೆ” ಎಂಬ ಘೋಷ ವಾಕ್ಯದ ಅಡಿಯಲ್ಲಿ ಮೂರು ವರ್ಷಗಳ (2024-2026) ಅಭಿಯಾನದ ಭಾಗವಾಗಿತ್ತು.

ಈ ಕಾರ್ಯಕ್ರಮದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಮತ್ತು ಅವರ ಕುಟುಂಬಗಳ ಉತ್ಸಾಹವನ್ನು ಹೆಚ್ಚಿಸುವ ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಆಸ್ಪತ್ರೆಯ ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ. ಸುಬಾ ಸೂರಿಯ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ಶ್ರೀ ಅರ್ಜುನ್ ಭಂಡಾರ್ಕರ್ ಮತ್ತು ಒನ್ ಗುಡ್ ಸ್ಟೆಪ್ ಫೌಂಡೇಶನ್‌ನ ಸಂಸ್ಥಾಪಕಿ ಶ್ರೀಮತಿ ಅಮಿತಾ ಪೈ ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.

ಬಾಲ್ಯದ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸಮುದಾಯದ ಒಳಗೊಳ್ಳುವಿಕೆಯ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದ ಡಾ. ಪದ್ಮರಾಜ್ ಹೆಗ್ಡೆ ಅವರು ಈ ಕಾರ್ಯಕ್ರಮಕ್ಕೆ ತಮ್ಮ ಅಚಲ ಬೆಂಬಲವನ್ನು ವ್ಯಕ್ತಪಡಿಸಿದರು. ಸಮಗ್ರ ಆರೈಕೆಯನ್ನು ಒದಗಿಸುವಲ್ಲಿ ಮತ್ತು ಪ್ರತಿ ಮಗುವೂ ಅರ್ಹವಾದ ಚಿಕಿತ್ಸೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಸಹಯೋಗದ ಪ್ರಯತ್ನಗಳ ಮಹತ್ವವನ್ನು ಅವರು ಎತ್ತಿ ತೋರಿಸಿದರು.

ಮಕ್ಕಳ ಕ್ಯಾನ್ಸರ್ ರೋಗಿಗಳಿಗೆ ಅಸಾಧಾರಣ ಆರೈಕೆ ನೀಡುವ ಆಸ್ಪತ್ರೆಯ ಬದ್ಧತೆಯನ್ನು ಡಾ. ಅವಿನಾಶ್ ಶೆಟ್ಟಿ ಒತ್ತಿ ಹೇಳಿದರು. ಚಿಕಿತ್ಸಾ ಆಯ್ಕೆಗಳಲ್ಲಿನ ಪ್ರಗತಿಗಳು ಮತ್ತುಕ್ಯಾನ್ಸರ್ ಆರಂಭಿಕ ಪತ್ತೆ, ತಡೆಗಟ್ಟುವ ಕ್ರಮಗಳು ಮತ್ತು ಸುಧಾರಿತ ಚಿಕಿತ್ಸಾ ಆಯ್ಕೆಗಳ ಮಹತ್ವದ ಕುರಿತು ಅವರು ಮಾತನಾಡಿದರು. ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವಲ್ಲಿ ಭರವಸೆ ಮತ್ತು ಸಮಯೋಚಿತ ಚಿಕಿತ್ಸಾ ಕ್ರಮದ ನಿರ್ಧಾರದ ಮಹತ್ವವನ್ನು ಅವರ ಒಳನೋಟಗಳು ಎತ್ತಿ ತೋರಿಸಿದವು.

ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ವಿಭಾಗದ ಮುಖ್ಯಸ್ಥ ಡಾ. ವಾಸುದೇವ ಭಟ್ ಮತ್ತು ಅವರ ಸಮರ್ಪಿತ ಸಹೋದ್ಯೋಗಿಗಳು ಈ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಆಸ್ಪತ್ರೆಯ ಇತರ ಬೆಂಬಲಿತ ಸಿಬ್ಬಂದಿಯೊಂದಿಗೆ, ಈ ದಿನವನ್ನು ಸಂತೋಷದಿಂದ ತುಂಬಿರುವಂತೆ ಕಾರ್ಯಕ್ರಮ ಆಯೋಜಿಸಲಾಯಿತು , ಈ ಮೂಲಕ ಧೈರ್ಯಶಾಲಿ ಯುವ ರೋಗಿಗಳು ಮತ್ತು ಅವರ ಕುಟುಂಬಗಳ ಮುಖಗಳಲ್ಲಿ ನಗುವನ್ನು ತಂದರು.

ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವು ಕ್ಯಾನ್ಸರ್ ಎದುರಿಸುತ್ತಿರುವ ಮಕ್ಕಳಿಗೆ ಭರವಸೆ ಮತ್ತು ಸಂತೋಷವನ್ನು ಹರಡುವ ಸಂಸ್ಥೆಯ ಅಚಲ ಬದ್ಧತೆಗೆ ಒಂದು ಉಜ್ವಲ ಉದಾಹರಣೆಯಾಗಿದೆ. ಬಾಲ್ಯದ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಈ ಯುವ ಯೋಧರನ್ನು ಬೆಂಬಲಿಸುವ ಮಹತ್ವವನ್ನು ಇದು ನೆನಪಿಸುತ್ತದೆ.

Previous Post

ಉಡುಪಿ ಎಡಿಸಿಯಾಗಿ ಕೆಎಎಸ್‌ ಅಧಿಕಾರಿ ಅಬೀದ ಗದ್ಯಾಳ ನೇಮಕ..!!

Next Post

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥ ಉಡುಪಿಗೆ ಆಗಮನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥ ಉಡುಪಿಗೆ ಆಗಮನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

14/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

14/05/2026
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026

Recent News

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

14/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 14 ಗುರುವಾರ )

14/05/2026
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved