ಬ್ರಹ್ಮಾವರ :ಫೆಬ್ರವರಿ 24:ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14ಕೋಟಿ ರೂ. ಅಧಿಕ ಮೊತ್ತದ ಅವ್ಯವಹಾರದ ವಿರುದ್ಧ ಕ್ರಮಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಕಾರ್ಖಾನೆಯ ಎದುರು ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಾಲ್ಕನೇ ದಿನವಾದ ಸೋಮವಾರ ಕೂಡ ಮುಂದುವರೆದಿದೆ.


ಇಂದಿನ ಧರಣಿಯಲ್ಲಿ ಮಂದಾರ್ತಿ ವಲಯದ ರೈತ ಮುಖಂಡರು ಭಾಗವಹಿಸಿ, ಸರಕಾರ ಕೂಡಲೇ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ತನಿಖೆಯನ್ನು ಮುಂದುವರೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು. ಧರಣಿಗೆ ಸಂಪೂರ್ಣ ಬೆಂಬಲ ಘೋಷಿಸಿದರು.








