Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಲ್ಪೆ ದ್ವೀಪದಲ್ಲಿ ಓಮನ್ ಮೂಲದ ಬೋಟ್ ಪತ್ತೆ: ಬೋಟ್‌ನಲ್ಲಿದ್ದ ಮೀನುಗಾರರ ಬಂಧನ- ಪ್ರಕರಣ ದಾಖಲು!

Dhrishya News by Dhrishya News
26/02/2025
in ಮುಖಪುಟ
0
0
SHARES
40
VIEWS
Share on FacebookShare on Twitter

ಉಡುಪಿ:ಫೆಬ್ರವರಿ 26: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದೆ. ಓಮನ್ ದೇಶದ ಹಾರ್ಬರ್‌ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್‌ನಲ್ಲಿದ್ದ ಮೀನುಗಾರರನ್ನು ವಶಪಡಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಗಲ್ಫ್ ರಾಷ್ಟ್ರವಾಗಿರುವ ಓಮನ್ ದೇಶದಿಂದ ಬಂದಿರುವ ಬೋಟ್‌ನಲ್ಲಿ ತಮಿಳುನಾಡು ಮೂಲದ ಮೂವರು ಮೀನುಗಾರರು ಪತ್ತೆಯಾಗಿದ್ದಾರೆ. ತಮಿಳುನಾಡಿನ ಜೇಮ್ಸ್ ಫ್ರಾಂಕ್ಲಿನ್ (50), ರಾಬಿನ್ ಸ್ಟನ್ (50) ಹಾಗೂ ಡಿರೋಸ್ ಅಲ್ಪೋನ್ಸ್ (38) ಅವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರೂ ತಮಿಳುನಾಡಿನಿಂದ ವಲಸೆ ಹೋಗಿ ಓಮನ್ ಮೂಲದ ಬೋಟ್‌ನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿದ್ದರು. ಆದರೆ, ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದನು. ಜೊತೆಗೆ, ಇವರ ಪಾಸ್ ಪೋರ್ಟ್ ಕಿತ್ತುಕೊಂಡು ಚಿತ್ರಹಿಂಸೆ ನೀಡುತ್ತಿದ್ದನು ಎಂದು ಹೇಳಿದ್ದಾರೆ.

ಇದಾದ ನಂತರ ಮೂವರೂ ಪ್ರಾಣಭಯದಿಂದ ಓಮನ್ ಹಾರ್ಬಾರ್‌ನಿಂದ ತಪ್ಪಿಸಿಕೊಂಡು ಭಾರತೀಯ ಮೀನುಗಾರಿಕಾ ವ್ಯಾಪ್ತಿಗೆ ಬಂದಿದ್ದಾರೆ. ಸಮುದ್ರ ಮಾರ್ಗದಲ್ಲಿ 4,000 ಕಿಲೋ ಮೀಟರ್ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಡೀಸೆಲ್ ಖಾಲಿಯಾಗಿ, ಹಣ ಆಹಾರವಿಲ್ಲದೆ ಮೀನುಗಾರರು ಪರದಾಡುತ್ತಿದ್ದರು. ಆಗ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ವಿದೇಶಿ ಬೋಟ್ ಪತ್ತೆ ಹಚ್ಚಿದ ಸ್ಥಳೀಯ ಮೀನುಗಾರರು, ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದಾರೆ.

ಕಾರವಾರ ದಾಟಿ ಮಲ್ಪೆಯತ್ತ ಬರುತ್ತಿದ್ದ ವಿದೇಶಿ ಬೋಟ್ ಹಾಗೂ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿ ಬಂದಿರುವ ಹಿನ್ನೆಲೆಯಲ್ಲಿ ಕೋಸ್ಟ್ ಗಾರ್ಡ್ ಪೊಲೀಸರು ಅವರನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದೀಗ ಮೂವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಜಂಟಿ ಕಾರ್ಯಾಚರಣೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಎಸ್ಪಿ ಮಿಥುನ್ ಎಚ್.ಎನ್., ಇಂಡಿಯನ್ ಕೋಸ್ಟ್ ಗಾರ್ಡ್ ಕಮಾಂಡರ್ ವಿಶಾಲ್ ರಾಣ, ಕರಾವಳಿ ಕಾವಲು ಪೊಲೀಸ್ ಡಿವೈಎಸ್ಪಿ ಟಿ.ಎಸ್.ಸುಲ್ಫಿ, ಸಿಎಸ್ಪಿ ಠಾಣೆಯ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ, ಪೊಲೀಸ್ ನಿರೀಕ್ಷಕ ಲೋಕೇಶ್, ಸಿಎಸ್ಪಿ ಕೇಂದ್ರ ಕಛೇರಿಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ., ಮಲ್ಪೆ ಸಿ.ಎಸ್.ಪಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಶಿವಶಂಕರ್, ಫೆಮೀನಾ, ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಸಿ.ಎಸ್.ಪಿ., ಕೇಂದ್ರ ಗುಪ್ತಚರ ದಳ ಹಾಗೂ ಕಸ್ಟಮ್ಸ್ ಇಲಾಖೆಯ ಅಧಿಕಾರಿ ಹಾಗೂ ಪಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಶಿವಶಂಕರ್, ಫೆಮೀನಾ, ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಪಾಲ್ಗೊಂಡಿದ್ದರು. ಸಿ.ಎಸ್.ಪಿ., ಕೇಂದ್ರ ಗುಪ್ತಚರ ದಳ ಹಾಗೂ ಕಸ್ಟಮ್ಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಸಹಕರಿಸಿದ್ದಾರೆ.

Previous Post

ಉಡುಪಿ: ಸಾಕಿದ್ದ ನಾಯಿಗೆ ವಿಷ ಹಾಕಿ ಕೊಂದ ಆರೋಪ :ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರ ಹೊರತೆಗೆಸಿ ಪೋಸ್ಟ್ ಮಾರ್ಟಂ..!!

Next Post

ಅಮೆರಿಕಾದ ರಾಲೆ ನಗರದ ಶ್ರೀ ಪುತ್ತಿಗೆ ಮಠದಲ್ಲಿ ಪುರಂದರ ಉತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಮೆರಿಕಾದ ರಾಲೆ ನಗರದ ಶ್ರೀ ಪುತ್ತಿಗೆ ಮಠದಲ್ಲಿ ಪುರಂದರ ಉತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News