ಕಾರ್ಕಳ :ಫೆಬ್ರವರಿ 27:ಉಡುಪಿ: ಮಾ.2ರಂದು ಸಂಜೆ ಕಾರ್ಕಳದ ಗಾಂಧಿ ಮೈದಾನದಲ್ಲಿ ಮುಂಬರುವ ಜಿಪಂ, ತಾಪಂ ಚುನಾವಣೆಗೆ ಸಿದ್ಧತೆ ಯಾಗಿ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮ ನಡೆಯಲಿದೆ
ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕಾರ್ಕಳದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ 50 ವರ್ಷ ಪೂರೈಸಲಿರುವ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಡಾ. ಎಂ. ವೀರಪ್ಪ ಮೊಯ್ಲಿ ಅವರನ್ನು ಸನ್ಮಾನಿಸಲಾಗುವುದು
ಇದರೊಂದಿಗೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳು ಅದ್ದೂರಿಯಾಗಿ ನಡೆಯಲಿದೆ.








