Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾಪು  ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವೈಭವದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅದ್ದೂರಿ ತೆರೆ ..!!

Dhrishya News by Dhrishya News
06/03/2025
in ಮುಖಪುಟ
0
0
SHARES
61
VIEWS
Share on FacebookShare on Twitter

ಕಾಪು  : ಮಾರ್ಚ್ 06:ಸಂಪೂರ್ಣ ಶಿಲಾಮಯವಾಗಿ, ಅದ್ಭುತವಾಗಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25ರಿಂದ ಮಾ. 5ರ ವರೆಗೆ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ  ಕೊನೆಯ ದಿನವಾದ ಬುಧವಾರದಂದು ಶ್ರೀ ಮಾರಿಯಮ್ಮನ ದೇವರಿಗೆ ಮಹಾಬ್ರಹ್ಮಕಲಶಾಭಿಷೇಕ ನಡೆಸುವ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.

ಪವಿತ್ರ ಬ್ರಹ್ಮಕಲಶೋತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೇದಮೂರ್ತಿ ಕೆ.ಜಿ.ರಾಗವೇಂದ್ರ ತಂತ್ರಿ ಅವರ ಮಾರ್ಗದರ್ಶನದಲ್ಲಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿ ಹಾಗೂ ಇತರ ಅರ್ಚಕರ ನೇತೃತ್ವದಲ್ಲಿ ಮಹಾ ಬ್ರಹ್ಮಕಲಶಾಭಿಷೇಕ ನಡೆಯಿತು.

ಒಂದು ಚಿನ್ನದ ಕೆತ್ತಿದ ಬೆಳ್ಳಿ ಬ್ರಹ್ಮಕಲಶ, ಒಂಬತ್ತು ಬೆಳ್ಳಿ ಬ್ರಹ್ಮಕಲಶ, ಒಂಬತ್ತು ಬೆಳ್ಳಿ ದ್ರವ್ಯ ಕಲಶ, 88 ಬೆಳ್ಳಿ ಕಲಶ, ಮತ್ತು 901 ತಾಮ್ರ ಕಲಶಗಳು ಸೇರಿದಂತೆ ಒಟ್ಟು 1,008 ಕಲಶಗಳನ್ನು ವಿತರಿಸಲಾಯಿತು. ದೇವಾಲಯವು ಹೂವುಗಳಿಂದ ಸುಂದರವಾಗಿ ಅಲಂಕರಿಸಲ್ಪಟ್ಟಿತ್ತು ಮತ್ತು 50,000 ಕ್ಕೂ ಹೆಚ್ಚು ಭಕ್ತರು ಮಾರಿಯಮ್ಮ ದೇವಿಯ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಅವರು ಕೆ. ವಾಸುದೇವ್ ಶೆಟ್ಟಿ ಅವರಿಗೆ ‘ರಾಜಋಷಿ’ ಬಿರುದನ್ನು ಪ್ರದಾನ ಮಾಡಿದರು. ನವನೀತ್ ಶೆಟ್ಟಿ ಬರೆದಿರುವ “ಮಾರಿಯಮ್ಮ” ಪುಸ್ತಕವನ್ನು ಕೆ ವಾಸುದೇವ್ ಶೆಟ್ಟಿ ಬಿಡುಗಡೆ ಮಾಡಿದರು. ಮಹಾ ಬ್ರಹ್ಮಕಲಶಾಭಿಷೇಕದ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ಊಟ, ಬೆಳಗ್ಗೆ ಮತ್ತು ಸಂಜೆ ಉಪಾಹಾರ ಸಹಿತವಾಗಿ ಅನ್ನಪ್ರಸಾದ ಮತ್ತು ಉಪಾಹಾರದ ವ್ಯವಸ್ಥೆ ಇದ್ದು, ಈವರೆಗೆ ಎರಡು ಲಕ್ಷಕ್ಕೂ ಅಧಿಕ ಮಂದಿ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ಪಂಕ್ತಿ ಊಟ ಮತ್ತು ಬಫೆ ಊಟದ ವ್ಯವಸ್ಥೆಯೊಂದಿಗೆ ಒಂದಿನಿತೂ ಲೋಪವಿಲ್ಲದಂತೆ ಎಷ್ಟು ಮಂದಿ ಬಂದರೂ ಅನ್ನಪ್ರಸಾದ ವಿತರಣೆ ನಡೆದಿದೆ.

ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿ ಶ್ರೀ ದೇವಿ ಯ ದರ್ಶನ ಪಡೆದುಕೊಂಡು ಪುನೀತಾರಾದರು 

Previous Post

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ನಕ್ಷಲ್ ನಿಗ್ರಹ ಪಡೆಗೆ CPR training ಕಾರ್ಯಕ್ರಮ..!!

Next Post

ಮಣಿಪಾಲದ  ಕೆಎಂಸಿ ಗ್ರೀನ್ಸ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ  ಕೆಎಂಸಿ ಗ್ರೀನ್ಸ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved