ಉಡುಪಿ:ಮಾರ್ಚ್ 11: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಾಳೆ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇಇಂಜಿನಿಯರಿAಗ್, ಡಿಪ್ಲೋಮಾಹಾಗೂಇತರೆಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ , ಸ್ವವಿವರವುಳ್ಳ ರೆಸ್ಯೂಮ್ / ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ .
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯಕಛೇರಿ, ಜಿಲ್ಲಾಧಿಕಾರಿಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿಸಂಖ್ಯೆ:8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.