Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಹಕ್ಕಿ ಜ್ವರ – ಭಯ ಬೇಡ, ಎಚ್ಚರ ಇರಲಿ:ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ..!!

Dhrishya News by Dhrishya News
11/03/2025
in ಆರೋಗ್ಯ, ಮುಖಪುಟ
0
0
SHARES
54
VIEWS
Share on FacebookShare on Twitter

ಉಡುಪಿ:ಮಾರ್ಚ್ 11:ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕೋಳಿ ಫಾರಂ ಮತ್ತು ಮಾಂಸದ ಅಂಗಡಿಗಳ ಮೇಲೆ ನಿಗಾ ಇಡಲು ಆರೋಗ್ಯ ಮತ್ತು ಪಶು ಸಂಗೋಪನೆ ಇಲಾಖೆಯಿಂದ ಮುಂಜಾಗ್ರತೆ ಕ್ರಮಗಳನ್ನು ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 334 ಮಾಂಸದ (ಬಾಯ್ಲರ್‌) ಕೋಳಿ ಫಾರಂಗಳಲ್ಲಿ 12.50 ಲಕ್ಷ ಕೋಳಿಗಳು, ಒಂದು ಮೊಟ್ಟೆ (ಲೇಯರ್‌) ಕೋಳಿ ಫಾರಂನಲ್ಲಿ 35,000 ಕೋಳಿಗಳು ಹಾಗೂ 2.50 ಲಕ್ಷ ಹಿತ್ತಲ ಕೋಳಿಗಳಿವೆ. ಹಕ್ಕಿಜ್ವರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಹಕ್ಕಿಜ್ವರವು (ಹಕ್ಕಿಗಳಿಗೆ ಸಂಬಂಧಿಸಿದ) ವೈರಾಣುಗಳಿಂದ ಉಂಟಾಗುತ್ತದೆ. ಪ್ರಸ್ತುತ ಸೋಂಕು ತಗುಲಿದ ಹಕ್ಕಿಗಳ ಹಿಕ್ಕೆ, ಉಸಿರಾಟ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ.

ಕೋಳಿ ಸಾಕಾಣಿಕೆದಾರರು ಕೋಳಿ ಫಾರಂಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಸೂಕ್ತ ಔಷಧದಿಂದ ಫಾರಂಗಳನ್ನು ಸ್ಯಾನಿಟೈಸ್‌ ಮಾಡಬೇಕು. ಕೋಳಿಗಳ ಅಸಹಜ ಮರಣದ ಮಾಹಿತಿಯನ್ನು ಪಶುವೈದ್ಯರಿಗೆ ನೀಡಬೇಕು. ಸತ್ತ ಕೋಳಿಗಳ ಮರಣೋತ್ತರ ಪರೀಕ್ಷೆ ಮತ್ತು ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ನೀಡಬೇಕು. ಕಾಡುಹಕ್ಕಿಗಳು ಮತ್ತು ವಲಸೆ ಹಕ್ಕಿಗಳು ಹಿತ್ತಲ ಕೋಳಿ ಅಥವಾ ಫಾರಂ ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರ ವಹಿಸಬೇಕು. ಸತ್ತ ಕೋಳಿಗಳನ್ನು ಪುಕ್ಕ, ಹಿಕ್ಕೆ, ಒಳ ಅಂಗಾಂಗ ಇತ್ಯಾದಿಗಳನ್ನು ಗುಂಡಿತೋಡಿ ಹೂಳಬೇಕು. ಸರಕಾರದ ಅಧಿಕಾರಿಗಳಿಗೆ ಭೇಟಿ ನೀಡಿ ಪರಿಶೀಲಿಸಲು ಅನುವು ಮಾಡಿಕೊಡಬೇಕು.

ವ್ಯಾಧಿಗೊಳಗಾದ ಅಥವಾ ಆಕಸ್ಮಿಕವಾಗಿ ಮರಣ ಹೊಂದಿದ ಹಕ್ಕಿಗಳನ್ನು ಕೈಯಿಂದ ಮುಟ್ಟಬಾರದು.ಮನೆಯಲ್ಲಿ ಸೋಂಕು ತಗುಲಿದ ಹಕ್ಕಿಗಳ ಪುಕ್ಕಗಳನ್ನು ತೆಗೆಯಬಾರದು. ಕೊಲ್ಲುವುದು ಅಥವಾ ಕೈಯಿಂದ ಮುಟ್ಟಬಾರದು.

ಹಕ್ಕಿಗಳು ವೈರಾಣು ಸೋಂಕು ಹೊಂದಿರಬಹುದಾಗಿದ್ದು, ಮಕ್ಕಳು ಅಂತಹ ಹಕ್ಕಿಗಳನ್ನು ಸ್ಪರ್ಶಿಸುವುದು ಅಥವಾ ಅವುಗಳೊಂದಿಗೆ ಆಟ ಆಡಬಾರದು.ಹಕ್ಕಿಗಳನ್ನು ಮುಟ್ಟಿದರೆ ಕೈಗಳನ್ನು ಸಾಬೂನು ಬಳಸಿ ಚೆನ್ನಾಗಿ ತೊಳೆದು ಸ್ವತ್ಛಗೊಳಿಸಬೇಕು.

ಕೋಳಿ ಮರಿಗಳನ್ನು ಕೈಗಳಿಂದ ಮುಟ್ಟಬೇಕಾಗಿ ಬಂದರೆ ಮೂಗು ಮತ್ತು ಬಾಯಿಗೆ ಬಟ್ಟೆಯ ಮುಸುಕು ಹಾಕಿಕೊಳ್ಳಬೇಕು.ಹಕ್ಕಿಗಳನ್ನು ಮುಟ್ಟಿದ ಬಳಿಕ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಉಜ್ಜಿಕೊಳ್ಳಬಾರದು. ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು.

ಕೋಳಿಯ ಕಚ್ಚಾ ಉತ್ಪನ್ನಗಳನ್ನು ತಿನ್ನಲು ಉಪಯೋಗಿಸಬಾರದು. ಹಕ್ಕಿಗಳ ಅಸಹಜ ಸಾವಿನ ವಿಷಯ ತಿಳಿದು ಬಂದರೆ ಕೂಡಲೇ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಬೇಕು.

ಸತ್ತ ಹಕ್ಕಿಗಳನ್ನು ವಿಲೇವಾರಿ ಮಾಡುವಾಗ ಎಚ್ಚರಿಕೆಯನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Previous Post

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಮತ್ತೇರಡು ಮರಿಗಳಿಗೆ ಜನ್ಮ ನೀಡಿದ ರಾಣಿ ಹುಲಿ..!!

Next Post

ಆಶಾ ಕಾರ್ಯಕರ್ತೆ’ಯರ `ಪ್ರೋತ್ಸಾಹ ಧನ’ ಹೆಚ್ಚಳ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಶಾ ಕಾರ್ಯಕರ್ತೆ'ಯರ `ಪ್ರೋತ್ಸಾಹ ಧನ' ಹೆಚ್ಚಳ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved