Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್ ಸದಸ್ಯನ ಕಾಲಿಗೆ ಪೊಲೀಸರಿಂದ ಗುಂಡೇಟು..!!

Dhrishya News by Dhrishya News
13/03/2025
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಹಿರಿಯಡ್ಕ:ಮಾರ್ಚ್ 13 :ಗರುಡ ಗ್ಯಾಂಗನ ಸದಸ್ಯ ಇಸಾಕ್ ನನ್ನು ಹಾಸನದಲ್ಲಿ ಬಂಧಿಸಿ ಮಣಿಪಾಲಕ್ಕೆ ಕರೆತರುತ್ತಿದ್ದ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈತನ ಕಾಲಿಗೆ ಗುಂಡೇಟು ತಗಲಿದ್ದು, ಇಬ್ಬರು ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ನೆಲಮಂಗಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.

ಈ ತಂಡವು ಆರೋಪಿತರ ಜಾಡನ್ನು ಹಿಡಿದು, ಮಾ.12ರಂದು ಮಧ್ಯಾಹ್ನ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಸಾಕ್ ಸೇರಿದಂತೆ ಒಟ್ಟು ನಾಲ್ಕು ಆರೋಪಿ ಗಳನ್ನು ಬಂಧಿಸಿತ್ತು. ಈ ಎಲ್ಲಾ ಆರೋಪಿಗಳನ್ನು ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಣಿಪಾಲಕ್ಕೆ ಕರೆತರುವಾಗ, ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಸಂಜೆ 7.15ರ ಸುಮಾರಿಗೆ ಆರೋಪಿ ಇಸಾಕ್ ತನಗೆ ತುರ್ತಾಗಿ ವಾಂತಿ ಹಾಗೂ ಮೂತ್ರ ವಿಸರ್ಜನೆ ಮಾಡಲೇಬೇಕೆಂದು ಹಠ ಮಾಡಿದನು.

ಅದರಂತೆ ಪೊಲೀಸರು ವಾಹನವನ್ನು ನಿಲ್ಲಿಸಿದ್ದು ಮೂತ್ರ ವಿಸರ್ಜನೆ ನಂತರ ಇಸಾಕ್ ಏಕಾಏಕಿ ಅಲ್ಲೆ ಇದ್ದ ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ತಳ್ಳಿ, ಆತನ ಕೈಗೆ ಅಳವಡಿಸಲಾಗಿದ್ದ ಲೀಡಿಂಗ್ ಚೈನ್ ಅನ್ನು ಬಳಸಿ ಬಲವಾಗಿ ದೂಡಿದನು.

ನಂತರದಲ್ಲಿ ಇಬ್ಬರು ಪೊಲೀಸ್ ಉಪನಿರೀಕ್ಷಕರುಗಳು ಹಿಡಿಯಲು ಪ್ರಯತ್ನಿಸಿದಾಗ ಅವರಿಗೆ ಇಸಾಕ್ ಬಲವಾಗಿ ಒದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು. ಹೀಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಆತನ ಲೀಡಿಂಗ್ ಚೈನ್ ಪೊಲೀಸ್ ವಾಹನದ ಎದುರಿನ ಗ್ಲಾಸಿಗೆ ಬಡಿಯಿತು. ಇದರಿಂದ, ಗ್ಲಾಸ್ ಒಡೆದು ಅಧಿಕಾರಿ ಹಾಗೂ ಸಿಬ್ಬಂದಿಗೆ ಗಾಯಗಳಾಗಿವೆ.

ನಂತರದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದೇವರಾಜ್ ಆತನಿಗೆ ಎಚ್ಚರಿಕೆ ನೀಡಿದ್ದು, ಕೇಳದೆ ಇದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೂ ಕೂಡ ಇಸಾಕ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿದರು. ಇದರಿಂದ ಗಾಯಗೊಂಡ ಆರೋಪಿ ಇಸಾಕ್ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಕೆ.ಅರುಣ್ ತಿಳಿಸಿದ್ದಾರೆ.

Previous Post

ಕಾಪು:ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತ್ಯು…!!

Next Post

ಎನ್‌ಎಸ್‌ಇ ಅಕಾಡೆಮಿ ಮತ್ತು ಮಾಹೆ ಮಧ್ಯೆ ಕ್ಯಾಪಿಟಲ್ ಮಾರ್ಕೆಟ್‌ಗಳು, ಫಿನ್‌ಟೆಕ್ ಮತ್ತು ಅನಾಲಿಟಿಕ್ಸ್‌ನಲ್ಲಿ ಅತ್ಯಾಧುನಿಕ ಸರ್ಟಿಫಿಕೇಶನ್ ಪ್ರೋಗ್ರಾಂಗಾಗಿ ಒಪ್ಪಂದ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎನ್‌ಎಸ್‌ಇ ಅಕಾಡೆಮಿ ಮತ್ತು ಮಾಹೆ ಮಧ್ಯೆ ಕ್ಯಾಪಿಟಲ್ ಮಾರ್ಕೆಟ್‌ಗಳು, ಫಿನ್‌ಟೆಕ್ ಮತ್ತು ಅನಾಲಿಟಿಕ್ಸ್‌ನಲ್ಲಿ ಅತ್ಯಾಧುನಿಕ ಸರ್ಟಿಫಿಕೇಶನ್ ಪ್ರೋಗ್ರಾಂಗಾಗಿ ಒಪ್ಪಂದ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved