Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ:ಸುವರ್ಣಪಥಕ್ಕೆ ಪ್ರಹ್ಲಾದ ಜೋಷಿ ಭೂಮಿಪೂಜೆ..!!

Dhrishya News by Dhrishya News
16/03/2025
in ಮುಖಪುಟ
0
0
SHARES
25
VIEWS
Share on FacebookShare on Twitter

ಉಡುಪಿ:ಮಾರ್ಚ್ 16:ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದಾರೆ.

ಈ ಯೋಜನೆಗಳಲ್ಲಿ ಅತ್ಯಂತ ಮಹತ್ತರವಾದ ಗೀತಾಮಂದಿರ ಸಮೀಪದಿಂದ ರಥಬೀದಿ ಸಂಪರ್ಕಿಸುವ ಅತ್ಯಾಕರ್ಷಕವಾದ ಸುವರ್ಣ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆಯನ್ನು ಪರಮಪೂಜ್ಯ ಉಭಯ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ಕೇಂದ್ರ ಸರ್ಕಾರದ ಮಾನ್ಯ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರು ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾನ್ಯ ಪ್ರಹ್ಲಾದ ಜೋಶಿ ಅವರು ಪರಮಪೂಜ್ಯ ಶ್ರೀಪಾದರು ವಿಶ್ವದಾದ್ಯಂತ ಸ್ಥಾಪಿಸಿರುವ ಮಠಗಳಿಂದ ನಿರಂತರವಾಗಿ ನಡೆಯುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಮುಕ್ತವಾಗಿ ಶ್ಲಾಘಿಸಿದರು.

ಈ ದೇಶದ ಮುಖ್ಯ ಗ್ರಂಥವಾದ ಭಗವದ್ಗೀತಾ ಪ್ರಚಾರದ ಉದ್ದೇಶದಿಂದ ಪೂಜ್ಯರು ನಡೆಸುತ್ತಿರುವ ಕೋಟಿ ಗೀತಾ ಲೇಖನ ಯಜ್ಞದ ಆಂದೋಲನವನ್ನು ಪ್ರಶಂಸಿಸಿದರು.

ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀ ಪ್ರಹ್ಲಾದ ಜೋಶಿ ಅವರನ್ನು ಆದರ್ಶ ರಾಜಕಾರಣಿ ಕಳಂಕ ರಹಿತ ರಾಜಕಾರಣಿ ಎಂದು ಪ್ರಶಂಸಿಸಿದರು.

ಶ್ರೀ ಜೋಷಿ ಅವರ ಉದಾತ್ತವಾದ ಕಾರ್ಯತತ್ಪರತೆಯನ್ನು ಶ್ಲಾಘಿಸಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಪರಮಾನುಗ್ರಹದಿಂದ ಇನ್ನೂ ಹೆಚ್ಚಿನ ಸಾಧನೆಗಳು ನಡೆಯಲಿ ಎಂದು ಪ್ರಾರ್ಥಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶ್ರೀ ಜೋಷಿ ದಂಪತಿಗಳಿಗೆ *ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು ನೀಡಿದರು. .

ಕೋಟಿಗೀತಾಲೇಖನ ಯಜ್ಞದಲ್ಲಿ ದೀಕ್ಷಿತರಾಗಿ 110 ಬಾರಿ ಗೀತೆಯನ್ನು ಬರೆದ ಶ್ರೀಮತಿ ನಿರ್ಮಲಾ ಕಾಮತ್ ಅವರು 110 ಪುಸ್ತಕಗಳನ್ನು ಪೂಜ್ಯ ಶ್ರೀಪಾದರಿಗೆ ಸಮರ್ಪಿಸಿದರು.

ಹಾಗೆಯೇ ಈಗಾಗಲೇ 85 ಬಾರಿ ಗೀತೆಯನ್ನು ಬರೆದ ಶ್ರೀಮತಿ ಶೋಭಾ ಕಿಣಿ ಅವರು ಪಸ್ತಕಗಳನ್ನು ಸಮರ್ಪಿಸಿದರು.

ಪೂಜ್ಯ ಶ್ರೀಪಾದರು ಇವರಿಬ್ಬರ ಸಾಧನೆಯನ್ನು ಪ್ರಶಂಸಿಸಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಪ್ರಸಾದವನ್ನು ನೀಡಿ ಅನುಗ್ರಹಿಸಿದರು.

ಸಭೆಯಲ್ಲಿ ಶ್ರೀ ಪ್ರಹ್ಲಾದ ಜೋಶಿ ಅವರ ಆಪ್ತ ಕಾರ್ಯದರ್ಶಿಗಳಾದ ಶ್ರೀ ನಾರಾಯಣ ಗಂಭೀರ್, ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯರು, ಶ್ರೀಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ಎಂ. ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿಗಳಾದ ಶ್ರೀ ರತೀಶ್ ತಂತ್ರಿ, ಶ್ರೀ ಸಂತೋಷ್ ಶೆಟ್ಟಿ, ಸುಗುಣ ಮಾಲಾ ಪತ್ರಿಕೆಯ ಸಂಪಾದಕರಾದ ಶ್ರೀ ಮಹಿತೋಷ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಡಾ. ಬಿ.ಗೋಪಾಲಾಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು.

ಮಧ್ಯಾಹ್ನ ಪೂಜಾ ಸಮಯದಲ್ಲಿ ಬಂದ ಸಚಿವರು ಶ್ರೀಕೃಷ್ಣಮುಖ್ಯಪ್ರಾಣರ ದರ್ಶನ ಪಡೆದು ಭೋಜನ ಪ್ರಸಾದವನ್ನು ಸ್ವೀಕರಿಸಿದರು.

Previous Post

ಉಡುಪಿ :ಸಾಲದ ಮರುಪಾವತಿಗಾಗಿ ಒತ್ತಡ: ಮನೆಗೆ ಅಕ್ರಮ ಪ್ರವೇಶಿಸಿ ನಿಂದನೆ- ಪ್ರಕರಣ ಧಾಖಲು..!!

Next Post

ಮಂಗಳೂರು : ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಬಿದ್ದು 6ನೇ ತರಗತಿ ವಿದ್ಯಾರ್ಥಿ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಬಿದ್ದು 6ನೇ ತರಗತಿ ವಿದ್ಯಾರ್ಥಿ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved