Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಸಜೆ, ದಂಡ ವಿಧಿಸಿ ನ್ಯಾಯಾಲಯ ತೀರ್ಪು ..!!

Dhrishya News by Dhrishya News
16/03/2025
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಮಂಗಳೂರು :ಮಾರ್ಚ್ 16: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -2 ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಸಜೆ ವಿಧಿಸಿ ಶನಿವಾರ ತೀರ್ಪು ನೀಡಿದ್ದಾರೆ

ಮುಲ್ಕಿ ತಾಲೂಕು ಏಳಿಂಜೆ ನಿವಾಸಿ ರವಿ (35) ಶಿಕ್ಷೆಗೊಳಗಾದ ಆರೋಪಿ. ಈತ 2023ರ ಜೂನ್ ತಿಂಗಳಿನಿಂದ ಡಿಸೆಂಬರ್‌ವರೆಗೆ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈ ವೇಳೆ ಆತನ ಗೆಳೆಯನ ಪುತ್ರಿ ಮೂಲತಃ ಚಿಕ್ಕಮಗಳೂರಿನ, 17 ವರ್ಷ ವಯಸ್ಸಿನ ಬಾಲಕಿ ಪಿಯುಸಿ ವಿದ್ಯಾಭ್ಯಾಸಕ್ಕೆಂದು ಬಂದು ಆತನ ಮನೆಯಲ್ಲಿ ಉಳಿದುಕೊಂಡಿದ್ದಳು. ಆರೋಪಿ ರವಿ ಆಕೆಯನ್ನು 2023ರ ನವೆಂಬರ್‌ನಲ್ಲಿ ಕಾರ್ಕಳ ತಾಲೂಕು ಇನ್ನಾದ ರಸ್ತೆ ಬದಿಯ ಗುಡ್ಡ ಜಾಗಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಅನಂತರ ಆತ 2023ರ ಡಿಸೆಂಬರ್‌ನಿಂದ ಏಳಿಂಜೆಯಲ್ಲಿ ವಾಸವಾಗಿದ್ದ. ಆಗ ಮನೆಯಲ್ಲಿ ಹಲವು ಬಾರಿ ಅತ್ಯಾಚಾರವೆಸಗಿದ್ದ. 2024ರ ಎ.11ರಂದು ಸಂಜೆ ಏಳಿಂಜೆಯ ಹಾಡಿ ಜಾಗಕ್ಕೆ ಕರೆದೊಯ್ದು ಅಲ್ಲಿಯೂ ಅತ್ಯಾಚಾರವೆಸಗಿದ್ದ ಎನ್ನಲಾಗಿದ್ದು, ಪರಿಣಾಮವಾಗಿ ಬಾಲಕಿ ಗರ್ಭ ಧರಿಸಿದ್ದಳು. ಆರೋಪಿ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಧೀಶರು ಆರೋಪಿಗೆ ಪೊಕ್ಸೋ ಕಾಯಿದೆಯ ಕಲಂ 6 ಮತ್ತು ಐಪಿಸಿ 376(3) ಹಾಗೂ 376(2)(ಎಫ್)(ಎನ್) ಅಡಿಯಲ್ಲಿ 20 ವರ್ಷ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ 4 ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತವನ್ನು ಬಾಲಕಿಗೆ ನೀಡುವಂತೆ ಹಾಗೂ ಕಾನೂನು ಸೇವಾ ಪ್ರಾಧಿಕಾರದಿಂದ 6.50 ಲ.ರೂ. ಪರಿಹಾರವನ್ನು ಬಾಲಕಿಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಮುಲ್ಕಿ ಇನ್ಸ್‌ಪೆಕ್ಟರ್ ಆಗಿದ್ದ ವಿದ್ಯಾಧರ್ ಡಿ. ಬಾಯ್ಕೇರಿಕರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಶೇಷ ಸರಕಾರಿ ಅಭಿಯೋಜಕ ಬದ್ರಿನಾಥ ನಾಯರಿ ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಅವರು ಸಾಕ್ಷಿಗಳನ್ನು ವಿಚಾರಿಸಿ ಸರಕಾರದ ಪರವಾಗಿ ವಾದಿಸಿದ್ದರು.

Previous Post

ಕಾಪು: ಅಕ್ರಮವಾಗಿ ಅಕ್ಕಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದ  ಇಬ್ಬರು ಆರೋಪಿಗಳ ಬಂಧನ..!!

Next Post

ಉಡುಪಿ: ನಗರಸಭೆಯ 2025-26ನೇ ಸಾಲಿನ 5.17ಕೋಟಿ ರೂ. ಮಿಗತೆಯ ಬಜೆಟ್‌ ಮಂಡನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ನಗರಸಭೆಯ 2025-26ನೇ ಸಾಲಿನ 5.17ಕೋಟಿ ರೂ. ಮಿಗತೆಯ ಬಜೆಟ್‌ ಮಂಡನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News