Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ಪೊಲೀಸರಿಂದ 75 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ..!!

Dhrishya News by Dhrishya News
17/03/2025
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಮಂಗಳೂರು ಮಾರ್ಚ್​ 17: ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ () ಕಾರ್ಯಾಚರಣೆ ನಡೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ರಾಜಧಾನಿ ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿದ್ದಾರೆ. ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಐದು ತಿಂಗಳಿಂದ ಕಾರ್ಯಾಚರಣೆ ನಡೆಸಿ ಡ್ರಗ್ಸ್​ ಜಾಲ ಭೇದಿಸಿದ್ದಾರೆ

ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್​ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ 100 ಕೆಜಿ ಎಮ್​ಡಿಎಮ್​ಎ ಡ್ರಗ್ಸ್ ಬೆಂಗಳೂರಿಗೆ ಬರುತ್ತಿದೆ. ಬೆಂಗಳೂರಿನಲ್ಲಿ ತಿಂಗಳಿಗೆ ಕನಿಷ್ಠ 50-60 ಕೋಟಿ ರೂಪಾಯಿ ಡ್ರಗ್ ವಹಿವಾಟು ನಡೆಯುತ್ತದೆ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಡ್ರಗ್ ಮಾಫಿಯಾಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಸಾಥ್​ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಗಳೂರು ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್​ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದೆ. 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿದ್ದೇವೆ. ದಕ್ಷಿಣ ಆಫ್ರಿಕಾ ದೇಶದ ಇಬ್ಬರು ಪ್ರಜೆಗಳಾದ ಬಂಬಾ ಫಂಟಾ, ಅಬಿಗೈಲ್ ಅಡೋನಿಸ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ತಿಳಿಸಿದರು

6 ತಿಂಗಳ ಹಿಂದೆ ಹೈದರ್ ಆಲಿ ಎಂಬಾತನನ್ನು ವಶಕ್ಕೆ ಪಡೆದಿದ್ದೇವು. ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದೆವು. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ನೈಜೀರಿಯಾ ಪ್ರಜೆಯ ಮಾಹಿತಿ ಸಿಕ್ಕಿತ್ತು. ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ 6 ಕೋಟಿ ಮೌಲ್ಯದ ಎಂಡಿಎಂಎ ಸಮೇತ ಪೀಟರ್​ನನ್ನು ವಶಕ್ಕೆ ಪಡೆದಿದ್ದೇವು. ಈ ಪ್ರಕರಣದ ಬಳಿಕ ತನಿಖೆ ನಡೆಸಿ ಕಿಂಗ್​ಪಿನ್ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೇವು.

ಇದರ ಮೂಲ ಪತ್ತೆಗೆ ಇಳಿಯಲು ಕಳೆದ 6 ತಿಂಗಳಿಂದ ಕಾರ್ಯಾಚರಣೆ ನಡೆಸಲಾಯ್ತು. ವಿದೇಶಿ ಪ್ರಜೆಗಳು ಡ್ರಗ್ಸ್​ ಸಾಗಿಸುವ ಮಾಹಿತಿ ಸಿಕ್ಕಿತ್ತು. ಮಾರ್ಚ್​ 14ರಂದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ವಿದೇಶಿ ಮಹಿಳೆಯರು ಡ್ರಗ್ಸ್​ ತರುತ್ತಿರುವ ಬಗ್ಗೆ ಮಾಹಿತಿ ದೊರೆಯಿತು ಎಂದು ಹೇಳಿದರು.

ಇಬ್ಬರು ಮಹಿಳೆಯರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಬಂಧಿಸಲಾಗಿದೆ. ಟ್ರಾಲಿ ಟ್ರಾವೆಲ್ ಬ್ಯಾಗ್​ನಲ್ಲಿ ಎಂಡಿಎಂಎ ಡ್ರಗ್ಸ್​ ಇತ್ತು. 75 ಕೋಟಿ ರೂ. ಮೌಲ್ಯದ ಎಂಡಿಎಂಎ ಜಪ್ತಿ ಮಾಡಲಾಗಿದೆ. 4 ಮೊಬೈಲ್​ಗಳು, ಪಾಸ್‌ಪೋರ್ಟ್, 18 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬೆಂಗಳೂರು ಸೇರಿದಂತೆ ಇತರೆ ಭಾಗದ ನೈಜೀರಿಯನ್ ಪೆಡ್ಲರ್​​ಗಳಿಗೆ ಸಾಗಾಟ ಮಾಡುತ್ತಿದ್ದರು. ನಕಲಿ ಪಾಸ್​ಪೋರ್ಟ್ ಹಾಗೂ ನಕಲಿ ವೀಸಾ ಬಳಸಿ ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಲಿದೆ ಎಂದರು.

Previous Post

ಮಂಗಳೂರು : ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಬಿದ್ದು 6ನೇ ತರಗತಿ ವಿದ್ಯಾರ್ಥಿ ಸಾವು..!!

Next Post

ಮಾ.19ರಂದು ಸುನೀತಾ ವಿಲಿಯಮ್ಸ್, ಬಚ್ ವಿಲ್ಮೋರ್ ಭೂಮಿಗೆ ವಾಪಾಸ್: ನಾಸಾ ಮಾಹಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾ.19ರಂದು ಸುನೀತಾ ವಿಲಿಯಮ್ಸ್, ಬಚ್ ವಿಲ್ಮೋರ್ ಭೂಮಿಗೆ ವಾಪಾಸ್: ನಾಸಾ ಮಾಹಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved