Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ :ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ SSLC ಪರೀಕ್ಷೆ :ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News by Dhrishya News
19/03/2025
in ಉದ್ಯೋಗ/ಶಿಕ್ಷಣ
0
ಉಡುಪಿ :ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ SSLC ಪರೀಕ್ಷೆ :ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ..!!
0
SHARES
49
VIEWS
Share on FacebookShare on Twitter

ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಎಸೆಸೆಲ್ಸಿ ಪರೀಕ್ಷೆ :ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ..!!

ಉಡುಪಿ : ಮಾರ್ಚ್ 19:ಮೊದಲ ಸುತ್ತಿನ ಎಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಜಿಲ್ಲೆಯಲ್ಲಿ ನಿಗದಿ ಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.

ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರ ಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2003ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಯ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿಬರ್‌ಂಧಿಸಲಾಗಿದೆ. ಐದು ಹಾಗೂ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದನ್ನು ಸಹ ನಿಷೇಧಿಸಲಾಗಿದೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ 200ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್ ಗಳನ್ನು ಸಹ ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂದಿಸಲಾಗಿದೆ. ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಹಿಯರಿಂಗ್‌ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತ ವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿದೆ. ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್ಸ್ಪರೆಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ಸಹ ನಿಷೇಧಿಸಲಾಗಿದೆ.

ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ/ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆ ಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಲೋಕ ಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವು ಕಾರ್ಯನಿರತ ಪರೀಕ್ಷಾ ಅಧಿಕಾರಿ / ಸಿಬ್ಬಂದಿ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.

ಈ ನಿಷೇಧಾಜ್ಞೆ ಆದೇಶ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Previous Post

9 ತಿಂಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ `ಸುನೀತಾ ವಿಲಿಯಮ್ಸ್’..!!

Next Post

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ಮನ್ಮಹಾರ ರಥೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ಮನ್ಮಹಾರ ರಥೋತ್ಸವ ಸಂಪನ್ನ..!!

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ಮನ್ಮಹಾರ ರಥೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್  ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

31/05/2025
ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

30/05/2025
ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ  – ವಾರ್ಷಿಕ ಸಂಗೀತ ಕಾರ್ಯಕ್ರಮ.!!

ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ – ವಾರ್ಷಿಕ ಸಂಗೀತ ಕಾರ್ಯಕ್ರಮ.!!

30/05/2025
ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

30/05/2025

Recent News

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್  ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

31/05/2025
ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

30/05/2025
ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ  – ವಾರ್ಷಿಕ ಸಂಗೀತ ಕಾರ್ಯಕ್ರಮ.!!

ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ – ವಾರ್ಷಿಕ ಸಂಗೀತ ಕಾರ್ಯಕ್ರಮ.!!

30/05/2025
ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

30/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved