Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟ : ವ್ರದ್ದೆಯ 2.5 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಪ್ರಕರಣ ಆರೋಪಿ ಪೊಲೀಸ್ ವಶಕ್ಕೆ…!!

Dhrishya News by Dhrishya News
27/03/2025
in ಸುದ್ದಿಗಳು
0
0
SHARES
52
VIEWS
Share on FacebookShare on Twitter

ಕುಂದಾಪುರ: ಮಾರ್ಚ್ 27:ಕಳ್ಳನೋರ್ವ ಮನೆಯವರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿ ವೃದ್ಧೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ.ಇದೀಗ ಆರೋಪಿಯನ್ನು ಬಂಧಿಸುವಲ್ಲಿ  ಕೋಟ ಪೊಲೀಸರು ಯಶಶ್ವಿ ಯಾಗಿದ್ದಾರೆ

ಮಣೂರು ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ (28) ಬಂಧಿತ ಆರೋಪಿ ಎಂದು ತಿಳಿದು ಬಂದಿದ್ದು ಆರೋಪಿಯಿಂದ 25 ಗ್ರಾಂ ತೂಕದ ಸುಮಾರು 2.5 ಲಕ್ಷ ಮೌಲ್ಯದ ಕಳ್ಳತನವಾಗಿದ್ದ ಚಿನ್ನದ ಸರವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಮಾ.20ರಂದು ಮನೆಯವರೆಲ್ಲ ಸ್ಥಳೀಯ ಕೊಟ್ಟೂರು ದೇಗುಲದ ಜಾತ್ರೆಗೆಂದು ತೆರಳಿದ್ದರು. ಈ ವೇಳೆ ಮನೆಯಲ್ಲಿ ರುದ್ರಮ್ಮ(92) ಒಬ್ಬರೇ ಮನೆಯಲ್ಲಿ ಇದ್ದರು. ದಿನನಿತ್ಯದಂತೆ ಅವರು ಮಲಗುವಾಗ ತಾನು ಧರಿಸಿದ್ದ ಚಿನ್ನದ ಸರವನ್ನು ಮಂಚದ ಮೇಲೆ ಕಳಚಿಟ್ಟಿದ್ದರು. ಜಾತ್ರೆಗೆ ತೆರಳಿದ್ದ ಅವರ ಅಳಿಯ ಶ್ರೀಧರ್ ಅವರು ದಿಢೀರನೇ ಮನೆಗೆ ಬಂದಿದ್ದು, ಈ ವೇಳೆ ಮನೆಯ ಬಾಗಿಲು ಒಡೆದಿರುವುದು ಕಂಡುಬಂದಿತ್ತು.

ಈ ಬಗ್ಗೆ ರುದ್ರಮ್ಮರನ್ನು ಶ್ರೀಧರ್ ಅವರು ವಿಚಾರಿಸಿದಾಗ “ಯಾರೋ ಹುಡುಗ ಬಂದಿದ್ದ. ನನಗೆ ದೃಷ್ಟಿ ದೋಷವಿರುವುದರಿಂದ ಯಾರೆಂದು ತಿಳಿಯಲಿಲ್ಲ. ನಾನು ನೀವೇ ಬಂದಿರಬಹುದು ಎಂದು ಜಾತ್ರೆ ಮುಗಿಯಿತಾ? ಹೇಗಾಯಿತು ಎಂದು ಆತನಲ್ಲಿ ಕೇಳಿದ್ದೆ. ಆತನೂ ಮನೆಯವರಂತೆಯೇ ಮಾತನಾಡಿದ್ದ” ಎಂದು ತಿಳಿಸಿದ್ದರು. ಆಗ ಅನುಮಾನಗೊಂಡ ಶ್ರೀಧರ್ ಅವರು ಪರಿಶೀಲಿಸಿದಾಗ ಮಾರು 2.5 ಲಕ್ಷ ಮೌಲ್ಯದ ಚಿನ್ನದ ಸರ ಕಳವಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ ಕೆ. ನಿರ್ದೇಶನದಲ್ಲಿ, ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ. ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ ಮತ್ತು ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ, ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಕಾನೂನು & ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ. ತನಿಖಾ ಪಿಎಸ್‌ಐ ಸುಧಾಪ್ರಭು ಪ್ರಕರಣದವಖಚಿತ ಮಾಹಿತಿಯನ್ನು ಪಡೆದು ಚಿನ್ನ ಕಳ್ಳವು ಆರೋಪಿಯನ್ನು ತೆಕ್ಕಟ್ಟೆ ಬಳಿಯಲ್ಲಿ ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಹಾಯಕ ಉಪನಿರೀಕ್ಷಕ ಜಯಪ್ರಕಾಶ್, ಹೆಡ್ ಕಾನ್ಸ್ ಟೇಬಲ್ ರೇವತಿ, ಕೃಷ್ಣ ಶೇರೆಗಾರ, ಶ್ರೀಧರ್, ಸಿಬ್ಬಂದಿಗಳಾದ ರಾಘವೇಂದ್ರ, ವಿಜಯೇಂದ್ರ ಭಾಗಿಯಾಗಿದ್ದರು.

Previous Post

ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ..!!

Next Post

ನಂದಿನಿ ಹಾಲು ಈಗ ಮತ್ತಷ್ಟು ದುಬಾರಿ : ಲೀಟರ್ ಗೆ 4 ರೂ. ಏರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಂದಿನಿ ಹಾಲು ಈಗ ಮತ್ತಷ್ಟು ದುಬಾರಿ : ಲೀಟರ್ ಗೆ 4 ರೂ. ಏರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News