Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಧರ್ಮಸ್ಥಳದಲ್ಲಿ ಏಪ್ರಿಲ್ 6ಕ್ಕೆ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ನಿಂದ ತಾತ್ಕಾಲಿಕ ತಡ..!!

Dhrishya News by Dhrishya News
05/04/2025
in ಸುದ್ದಿಗಳು
0
0
SHARES
43
VIEWS
Share on FacebookShare on Twitter

ಬೆಳ್ತಂಗಡಿ: ಏಪ್ರಿಲ್ 05:ಧರ್ಮಸ್ಥಳದಲ್ಲಿ ಏಪ್ರಿಲ್ 6ಕ್ಕೆ ನಿರ್ಧಾರವಾಗಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆಯನ್ನು ಹೈಕೋರ್ಟ್ ನೀಡಿದೆ. ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಸೌಜನ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ತಡೆ ನೀಡಿ ಶುಕ್ರವಾರ ಆದೇಶಿಸಿದೆ.

ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಂದಿನ ವಿಚಾರಣೆಯವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆ ನಡೆಸಿರುವ ಕುರಿತಂತೆ ಸಂದೇಶಗಳನ್ನು ಪೀಠಕ್ಕೆ ಗಮನಕ್ಕೆ ತಂದರು. ಅಲ್ಲದೆ, ಈ ಸಂದೇಶಗಳು ನ್ಯಾಯಾಲಯ ಈ ಹಿಂದೆ ಧರ್ಮಸ್ಥಳ ದೇವಾಲಯ ಹಾಗೂ ಧರ್ಮಾಧಿಕಾರಿಗಳ ಪರವಾಗಿ ನ್ಯಾಯಾಲಯ ಹೊರಡಿಸಿದ್ದ ಆದೇಶಗಳನ್ನು ಉಲ್ಲಂಘಿಸುವ ಸಾಧ್ಯತೆಯಿದೆ. ಅಲ್ಲದೆ, ಬಲವಂತವಾಗಿ ದೇವಸ್ಥಾನ ಪ್ರವೇಶಿಸುವ ಯತ್ನಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಪೀಠಕ್ಕೆ ತಿಳಿಸಿದರು.

ಈ ಅಂಶ ದಾಖಲಿಸಿಕೊಂಡ ಪೀಠವು ಪ್ರತಿಭಟನೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಅಲ್ಲದೇ, ಪ್ರತಿಭಟನೆ ಆಯೋಜಕರಿಗೆ ತುರ್ತು ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದ ಆರೋಪಿಯನ್ನು ಈಗಾಗಲೇ ನಿರಪರಾಧಿ ಎಂಬುದಾಗಿ ನ್ಯಾಯಾಲಯ ಘೋಷಣೆ ಮಾಡಿದೆ. ಆದರೆ, ಈ ಕೊಲೆಗೆ ಕಾರಣವೇನು ಎಂದು ಪತ್ತೆ ಹಚ್ಚುವುದಕ್ಕೆ ಆಗ್ರಹಿಸಿ ಬೆಂಗಳೂರು ಹಾಗೂ ಏಪ್ರಿಲ್​ 6ರಂದು ಧರ್ಮಸ್ಥಳದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ವಿವಿಧ ಸಂಘಟನೆಗಳು ಮುಂದಾಗಿದ್ದವು.

ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡದ ಪೊಲೀಸ್​ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಪೀಠವು ಶಾಂತಿಯುತ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನಿರಾಕರಿಸಲಾಗದು ಎಂದು ಆದೇಶಿಸಿತ್ತು.

Previous Post

*₹60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಚಾಲನೆ.!!

Next Post

ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದ 6ನೇ ತರಗತಿಯ ವಿದ್ಯಾರ್ಥಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದ 6ನೇ ತರಗತಿಯ ವಿದ್ಯಾರ್ಥಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News