ಶಿವಮೊಗ್ಗ :ಏಪ್ರಿಲ್ 26 : ಸಾಗರ ತಾಲ್ಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಮೇ.1ರಿಂದ ಮುಕ್ತ ಅವಕಾಶ ನೀಡಲಾಗುತ್ತಿದೆ.
ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏಪ್ರಿಲ್ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮುಂದಿನ ತಿಂಗಳಿಂದ ಮತ್ತೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.