Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅತ್ತೂರು ಬೆಸಿಲಿಕಾದಲ್ಲಿ ಪೋಪ್ ಫ್ರಾನ್ಸಿಸ್ ಸ್ಮರಣೆ..!!

ಮಹಾ ಮಾನವತಾವಾದಿ ವಿಶ್ವಗುರು - ರಾಜೇಂದ್ರ ಭಟ್ ಕೆ..!!

Dhrishya News by Dhrishya News
29/04/2025
in ಸುದ್ದಿಗಳು
0
0
SHARES
1
VIEWS
Share on FacebookShare on Twitter

ಕಾರ್ಕಳ: ಏಪ್ರಿಲ್ 29: ಅತ್ತೂರಿನ ಸೇಂಟ್ ಲಾರೆನ್ಸ್ ಬೆಸಿಲಿಕಾದಲ್ಲಿ ಇತ್ತೀಚೆಗೆ ನಮ್ಮನ್ನು ಅಗಲಿದ ಪೋಪ್ ಫ್ರಾನ್ಸಿಸ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನೀಡುವ ಕಾರ್ಯಕ್ರಮವು ಸೋಮವಾರ ಸಂಜೆ ನಡೆಯಿತು. ಬೆಸಿಲಿಕಾದ ರೆಕ್ಟರ್ ವಂದನೀಯ ಅಲ್ಬನ್ ಡಿಸೋಜಾ ಅವರು ಅಧ್ಯಕ್ಷತೆ ವಹಿಸಿದ್ದರು. 

ನುಡಿನಮನ ಸಲ್ಲಿಸಿದ ಶಿಕ್ಷಕ ಮತ್ತು ರಾಷ್ಟ್ರಮಟ್ಟದ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ ಅವರು ಪೋಪ್ ಅವರ ಸಂದೇಶಗಳು ಮತ್ತು ಬದುಕು ಎಲ್ಲಾ ಧರ್ಮೀಯರಿಗೂ ಅನುಕರಣೀಯ. ಅವರು ಗೊಡ್ಡು ಸಂಪ್ರದಾಯಗಳ ವಿರುದ್ಧ ಸಮರ ಸಾರಿದ್ದರು ಮತ್ತು ವೈಜ್ಞಾನಿಕವಾಗಿ ಚಿಂತಿಸಿದರು. ಚರ್ಚುಗಳಲ್ಲಿ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕು. ಎಲ್ಲ ಧರ್ಮಗಳ ನಡುವೆ ಸಂವಾದಗಳು ನಡೆಯಬೇಕು. ಮರಣದಂಡನೆ ಮೊದಲಾದ ಅಮಾನವೀಯ ಕೃತ್ಯಗಳು ನಿಲ್ಲಬೇಕು. ಲೈಂಗಿಕ ಅಸಮಾನತೆಗಳು ನಿಲ್ಲಬೇಕು. ಪರಿಸರ ನಾಶ, ಜಾಗತಿಕ ತಾಪಮಾನ ಏರಿಕೆ ಮೊದಲಾದ ವಿಷಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಅತ್ಯಂತ ಸರಳವಾಗಿ ಬದುಕುವುದು ಹೇಗೆ ಎಂದವರು ತೋರಿಸಿಕೊಟ್ಟಿದ್ದಾರೆ. 12 ವರ್ಷಗಳ ಪೋಪ್ ಅವಧಿಯಲ್ಲಿ ಅವರು ವ್ಯಾಟಿಕನ್ ಅರಮನೆಯಲ್ಲಿ ವಾಸ ಮಾಡದೆ ಒಂದು ತೋಟದ ಮನೆಯಲ್ಲಿ ನೌಕರರ ಜೊತೆ ವಾಸ ಮಾಡಿದರು. ತಮ್ಮ ಇಡೀ ಬದುಕಿನಲ್ಲಿ ನೊಂದವರ, ದಲಿತರ, ದೀನರ ಸೇವೆ ಮಾಡುವುದನ್ನು ದೇವರ ಸೇವೆ ಎಂದು ಕರೆದರು ಮತ್ತು ಅದರಂತೆ ಬದುಕಿದವರು. ಮಹಾ ಮಾನವತಾವಾದಿ ಆಗಿ ವಿಶ್ವಕ್ಕೇ ಮಾದರಿಯಾದರು. ಬೈಬಲ್ಲಿನ ಪ್ರತೀ ಒಂದು ವಾಕ್ಯವನ್ನು ಬೋಧನೆ ಮಾಡಿದ್ದು ಮಾತ್ರವಲ್ಲ ಅದರಂತೆ ಬದುಕಿ ತೋರಿಸಿದರು. ಅವರ ಬದುಕು ಎಲ್ಲರಿಗೂ ಮಾದರಿ ಎಂದರು.

ಅತಿಥಿಯಾಗಿ ಭಾಗವಹಿಸಿದ ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ ಪೋಪ್ ಫ್ರಾನ್ಸಿಸ್ ಅವರು ಎಲ್ಲಾ ಧರ್ಮದವರನ್ನು ಪ್ರೀತಿಸಿದರು. ಅವರ ಬೋಧನೆಗಳು ಸಾರ್ವಕಾಲಿಕ ಸತ್ಯಗಳು. ಅವರಲ್ಲಿದ್ದ ಮುಗ್ಧತೆ ಮತ್ತು ನಿರಹಂಕಾರ ಗುಣಗಳು ಎಲ್ಲರಿಗೂ ಇಷ್ಟವಾಗುತ್ತವೆ. ಪೋಪ್ ಅವರು ಬದುಕಿದ ರೀತಿ ಎಲ್ಲರಿಗೂ ಅನುಕರಣೀಯ ಎಂದರು. 

ಅಧ್ಯಕ್ಷತೆ ವಹಿಸಿದ್ದ ಬೆಸಿಲಿಕಾದ ರೆಕ್ಟರ್ ವಂದನೀಯ ಅಲ್ಬನ್ ಡಿಸೋಜಾ ಅವರು ಮಾತನಾಡಿ 148 ಕೋಟಿ ಕ್ಯಾಥೋಲಿಕ್ ಕ್ರಿಶ್ಚಿಯನ್ ಬಂಧುಗಳು ಅವರು ತೋರಿದ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿಕೊಳ್ಳಬೇಕು. ಅವರು ದ್ವೇಷದ ಭಾವನೆಯನ್ನು ಹರಡದೆ ಪ್ರೀತಿಯ ಮೂಲಕ ಜಗತ್ತನ್ನು ಗೆಲ್ಲಲು ಹೊರಟವರು. ಅವರು ನಿಜವಾದ ವಿಶ್ವಮಾನವ ಎಂದು ಕಂಬನಿ ಮಿಡಿದರು. 

ಅತ್ತೂರು ಬೆಸಿಲಿಕಾದ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸಿಲ್ವಾ ಅವರು ಸ್ವಾಗತ ಮಾಡಿದರು. ಉಪನ್ಯಾಸಕ ಅಶೋಕ್ ಕ್ಲಿಫರ್ಡ್ ಡಿಸೋಜಾ ಅವರು ಕಾರ್ಯಕ್ರಮ ನಿರೂಪಣೆ ಮಾಡಿ ಧನ್ಯವಾದ ನೀಡಿದರು. ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೋಪ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

Previous Post

ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ..!!

Next Post

ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು 50 ಯಶಸ್ವಿ ಗರ್ಭಧಾರಣೆಗಳೊಂದಿಗೆ ಸಂತಾನೋತ್ಪತ್ತಿ ಔಷಧದಲ್ಲಿ ಮೈಲಿಗಲ್ಲು ಸ್ಥಾಪಿಸಿದೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು 50 ಯಶಸ್ವಿ ಗರ್ಭಧಾರಣೆಗಳೊಂದಿಗೆ ಸಂತಾನೋತ್ಪತ್ತಿ ಔಷಧದಲ್ಲಿ ಮೈಲಿಗಲ್ಲು ಸ್ಥಾಪಿಸಿದೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved