Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ..!!

Dhrishya News by Dhrishya News
02/05/2025
in ಮುಖಪುಟ
0
0
SHARES
75
VIEWS
Share on FacebookShare on Twitter

ಮಂಗಳೂರು, ಮೇ 2:  ಇಂದು ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು ಸುಹಾಸ್ ಶೆಟ್ಟಿ ನಿವಾಸ ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ.ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್​ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಘಟನೆ ಏನು???

ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಕೊಚ್ಚಿ ಗುರುವಾರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬಜಪೆಯ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಸುರತ್ಕಲ್‌ನಲ್ಲಿ 2022ರ ಜುಲೈ 28ರಂದು ನಡೆದಿದ್ದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್‌ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ತಿಳಿದುಬಂದಿದೆ.

‘ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್‌, ಪ್ರಜ್ವಲ್‌, ಅನ್ವಿತ್‌, ಲತೀಶ್‌ ಹಾಗೂ ಶಶಾಂಕ್‌ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್‌ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿತ್ತು.

ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಕೊನೆಯುಸಿರೆಳೆದಿದ್ದ ಎಂದು ವರದಿಗಳು ತಿಳಿಸಿವೆ.

ಇನ್ನು ಘಟನೆಯಲ್ಲಿ ಸುಹಾಸ್‌ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದು, ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧ

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಆಗಿದೆ. ಬಸ್ ಓಡಿಸಿದರೆ ನಮಗೂ ತೊಂದರೆಯಾಗಬಹುದು. ಈಗಾಗಲೇ ಬಸ್​ಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇವತ್ತು ಇಡೀ ದಿನ ಬಸ್ ಬಂದ್ ಇರುತ್ತದೆ ಎಂದು ಖಾಸಗಿ ಬಸ್ ಚಾಲಕರು ತಿಳಿಸಿದ್ದಾರೆ. ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

ಸದ್ಯ ಕೆಎಸ್​ಆರ್​ಟಿಸಿ ಬಸ್ ಸಂಚಾರ ನಡೆಯುತ್ತಿದೆ. ಮತ್ತೊಂದೆಡೆ, ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ. ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದೆ.

Previous Post

ನಾಳೆ SSLC ಪರೀಕ್ಷೆಯ ಫಲಿತಾಂಶ ಪ್ರಕಟ..!!

Next Post

ಕೊಡವೂರಿನಲ್ಲಿ  ಜುಮಾದಿ ಕೋಲ : ನಿಷೇಧಾಜ್ಞೆ ಜಾರಿಗೊಳಿಸಿ  ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊಡವೂರಿನಲ್ಲಿ  ಜುಮಾದಿ ಕೋಲ : ನಿಷೇಧಾಜ್ಞೆ ಜಾರಿಗೊಳಿಸಿ  ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News