ಉಡುಪಿ: ಮೇ 02:ಶ್ರೀಕ್ಷೇತ್ರ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್ ಗಿರಿ ಆಚಾರ್ಯರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿದರು.
ರಾಷ್ಟ್ರದ ಉದ್ದಗಲದಲ್ಲಿ ಸ್ಥಾಪಿತವಾಗಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪ್ರಧಾನ ಅಧಿಕಾರಿಗಳಾಗಿ ಹಾಗೂ ದೇಶದ ಪ್ರತಿಷ್ಠಿತ ವಿದ್ವಾಂಸರಾಗಿ, ವಿದ್ವಾಂಸರ ಪೋಷಣೆ , ಗ್ರಂಥಗಳ ಸಂರಕ್ಷಣೆ -ಸಂಶೋಧಕರಾಗಿ ಪಂ. ಗಿರಿ ಆಚಾರ್ಯರು ಅತ್ಯಂತ ಶ್ರೇಷ್ಠವಾದ ಸೇವೆಯನ್ನು ಸಲ್ಲಿಸಿದ್ದಾರೆ.
ಅವರು ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಪರ್ಯಾಯ ಶ್ರೀಪುತ್ತಿಗೆ ಮಠದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಿದರು.
ಈ ಸಂದರ್ಭದಲ್ಲಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥಶ್ರೀಪಾದರು ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಉಪಸ್ಥಿತರಿದ್ದರು








