Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

Dhrishya News by Dhrishya News
15/05/2025
in मौसम
0
0
SHARES
11
VIEWS
Share on FacebookShare on Twitter

ಬೆಂಗಳೂರು: 108 ಅಂಬ್ಯುಲೆನ್ಸ್‌ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯ ವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು.ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದರು.

108 ಅಂಬ್ಯುಲೆನ್ಸ್ ಗಳ ಸೇವೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಬಹು ಮುಖ್ಯವಾದದ್ದು. ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ.. ಸರ್ಕಾರದಿಂದ ಏಜನ್ಸಿಗೆ ಹಣ ಪಾವತಿಯಾದರೂ, ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ. ಸರ್ಕಾರ ಹಲವು ಬಾರಿ ಮದ್ಯಪ್ರವೇಶಿಸಿ ಅಂಬ್ಯುಲೆನ್ಸ್ ಡ್ರೈವರ್ ಗಳ ಸಮಸ್ಯೆಯನ್ನ ಬಗೆಹರಿಸಬೇಕಾಗಿತ್ತು.‌ ಸರ್ಕಾರವೇ ನಿರ್ವಹಣೆ ಮಾಡುವುದರಿಂದ ಇನ್ಮುಂದೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು 

108 ಅಂಬ್ಯುಲೆನ್ಸ್ ಗಳ ಮಾಲಿಕತ್ವ ಸರ್ಕಾರದ ಬಳಿ ಇದೆ. ಅಂಬ್ಯುಲೆನ್ಸ್ ಗಳಿಗೆ ಡಿಸೇಲ್, ಪೆಟ್ರೋಲ್ ನಿಂದ ಹಿಡಿದು ವಾಹನ ಚಾಲಕರ ವೇತನವನ್ನು ಕೂಡಾ ಸರ್ಕಾರವೇ ನೀಡುತ್ತಿತ್ತು. ಕೇವಲ ಒಂದು ಕಮಾಂಡ್ ಸೆಂಟರ್ ಮೂಲಕ ಖಾಸಗಿ ಏಜನ್ಸಿಯವರು ನಿರ್ವಹಣೆ ಮಾಡುತ್ತಿದ್ದರು. ಏಜನ್ಸಿಯ ಬದಲು ಆರೋಗ್ಯ ಇಲಾಖೆಯೇ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ಹಣ ಉಳಿತಾಯವಾಗಲಿದೆ. ಅಲ್ಲದೇ ವ್ಯವಸ್ಥೆಯಲ್ಲೂ ಸುಧಾರಣೆ ತರಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲ ಸ್ಟೇಟ್ ಅಂಬ್ಯುಲೆನ್ಸ್ ಗಳನ್ನ ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಇದಾದ ಬಳಿಕ ಮೂರು ತಿಂಗಳ ಒಳಗಾಗಿ 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು. ಬೆಂಗಳೂರಿನಲ್ಲಿ ಒಂದು ಕಮಾಂಡ್ ಸೆಂಟರ್ ಹಾಗೂ ಪ್ರತಿ ಜಿಲ್ಲೆಗಳಲ್ಲೂ ಪ್ರತ್ಯೇಕ ಕಮಾಂಡ್ ಸೆಂಟರ್ ಗಳನ್ನ ರಚಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.

Previous Post

ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆ : ತಂದೆ ಮಗ ಮೃತ್ಯು – ತಾಯಿ ಪರಿಸ್ಥಿತಿ ಗಂಭೀರ..!!

Next Post

ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved