Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!!

Dhrishya News by Dhrishya News
15/05/2025
in मौसम
0
0
SHARES
19
VIEWS
Share on FacebookShare on Twitter

ಬೆಂಗಳೂರು, ಮೇ 15: ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ಮಾಡಿದೆ

ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ

ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. 

ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ತುಮಕೂರು, ಮಂಗಳೂರು, ವಿಜಯಪುರ, ಬೆಂಗಳೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು, ಮೇ 15: ಕರ್ನಾಟಕದಾದ್ಯಂತ (Karnataka) ಬೆಳ್ಳಂಬೆಳಗ್ಗೆ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raids) ಮಾಡಿದೆ. ಆ ಮೂಲಕ ಭಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಶಾಕ್​ ನೀಡಲಾಗಿದೆ.

ಎಲ್ಲೆಲ್ಲಿ ದಾಳಿ?

ಬೆಂಗಳೂರಿನ 12, ತುಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ದಾಳಿ ಮಾಡಿದೆ.

ಯಾರ ಮೇಲೆ ದಾಳಿ?

ರಾಜಶೇಖರ್: ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ತುಮಕೂರು.

ಮಂಜುನಾಥ್: ಸರ್ವೆ ಸೂಪರ್ವೈಸರ್, ಮಂಗಳೂರು.

ಶ್ರೀಮತಿ ರೇಣುಕಾ: ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ವಿಜಯಪುರ.

ಮುರಳಿ ಟಿವಿ: ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು.

ಹೆಚ್​ಆರ್ ನಟರಾಜ್: ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ ಬೆಂಗಳೂರು.

ಅನಂತ್ ಕುಮಾರ್: SDA, ಹೊಸಕೋಟೆ ತಾಲೂಕು ಕಛೇರಿ ಬೆಂಗಳೂರು ಗ್ರಾಮಾಂತರ.

ಉಮಾಕಾಂತ್: ಶಹಾಪುರ ತಾಲೂಕು ಕಚೇರಿ ಯಾದಗಿರಿ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ತಹಶೀಲ್ದಾರ್ ಮನೆ ಮೇಲೆ ದಾಳಿ

ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಉಮಾಕಾಂತ ಹಳ್ಳೆ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ತುಮಕೂರಿನ ಒಟ್ಟು ಏಳು ಕಡೆ ದಾಳಿ

ತುಮಕೂರಿನಲ್ಲಿ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ನಿರ್ಮಿತಿ ಕೇಂದ್ರದ ಎಂಡಿ ರಾಜಶೇಖರ ಮತ್ತು ಅವರ ಸಹೋದರನ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಆರೋಪ

ಇನ್ನು ವಿಜಯಪುರ ‌ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸ್​​ಪಿ ಟಿ. ಮಲ್ಲೇಶ್​ ಹಾಗೂ‌ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಅತ್ತ ಸೊಲ್ಲಾಪುರ ನಗರದ ಕೆಹೆಚ್​​ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ಡಿವೈಎಸ್​​ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೋದನಹೊಸಹಳ್ಳಿಯಲ್ಲಿರುವ ಎಸ್​ಡಿಎ ಅನಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದೇವನಹಳ್ಳಿ ಹಾಗೂ ಹೊಸಕೋಟೆಯಲ್ಲಿ ಭೂ‌ ಮಂಜೂರಾತಿ ವಿಭಾಗದಲ್ಲಿ ಕೆಲಸ ಮಾಡಿದ್ದ ಅನಂತ್, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋgಪ ಹಿನ್ನೆಲೆ ಲೋಕಾ ದಾಳಿ ಮಾಡಿದೆ

Previous Post

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

Next Post

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜೂನ್ 8ಕ್ಕೆ ಪ್ರಯಾಣ ಆರಂಭಿಸಲಿರುವ ಭಾರತದ ಶುಭಾಂಶು ಶುಕ್ಲಾ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜೂನ್ 8ಕ್ಕೆ ಪ್ರಯಾಣ ಆರಂಭಿಸಲಿರುವ ಭಾರತದ ಶುಭಾಂಶು ಶುಕ್ಲಾ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News