Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಆರಂಭ..!!

Dhrishya News by Dhrishya News
24/05/2025
in मौसम
0
0
SHARES
17
VIEWS
Share on FacebookShare on Twitter

ಮೇ 24: ಮೈಸೂರು ಜಿಲ್ಲಾಸ್ಪತ್ರೆಯಲ್ಲಿ 20 ಬೆಡ್ ಗಳ ಕೀಮೋಥೆರಪಿ ಕೇಂದ್ರ ಹಾಗೂ ಉಳಿದ 15 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಕೀಮೋಥೆರಪಿ ಕೇಂದ್ರಗಳಿಗೆ ಚಾಲನೆ ದೊರೆತಿದೆ.

ಡೇ ಕೇರ್ ಕಿಮೋಥರಪಿ ಘಟಕಗಳ ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮುಂಬರುವ ದಿನಗಳಲ್ಲಿ 16 ಜಿಲ್ಲಾಸ್ಪತ್ರೆಗಳ ಜೊತೆಗೆ ಉಳಿದ ಜಿಲ್ಲೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಬಡವರಿಗು ಉತ್ತಮ ಚಿಕಿತ್ಸೆಗಳು ದೊರೆಯಬೇಕು. ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ರೋಗಿಗಳು ಪತ್ತೆಯಾಗುತ್ತಿದ್ದಾರೆ.. ಈ ನಿಟ್ಟಿನಲ್ಲಿ ನಮ್ಮ ಸರ್ಕಾರದ ಡೇ ಕೇರ್ ಕೀಮೋಥೆರಪಿ ಕೇಂದ್ರಗಳು ಬಡವರಿಗೆ ಹೆಚ್ಚು ಅನುಕೂಲ ಕಲ್ಪಿಸಲಿವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು

ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿಯುಳ್ಳ ವೈದ್ಯರಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಕಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ನಮ್ಮ ಜನರಲ್ಲಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ ಒದಗಿಸಿಕೊಡುತ್ತಿದ್ದೇವೆ. ಇಂದು 240 ಕೇಂದ್ರಗಳಲ್ಲಿ ಡಯಾಲಿಸಿಸ್ ಆರೋಗ್ಯ ಸೇವೆ ನೀಡಲಾಗುತ್ತಿದೆ.ಆರೋಗ್ಯಕರ ಜೀವನ ಮುಖ್ಯ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಜನರಿಗೆ ಕಿವಿಮಾತು ಹೇಳಿದರು.

 

ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಆರಂಭವಾಗಲಿವೆ. ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್​​ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಇದೂ ಕೂಡ ಕಷ್ಟದ ಕೆಲಸ. ಹಾಗಾಗಿ ಬಡವರಿಗೆ ಅನುಕೂಲ ಆಗಲಿ ಎಂದು 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಓಪನ್ ಮಾಡಲಾಗಿದೆ.

ಆಪ್ತ ಸಮಾಲೋಚನೆ, ಮೆಡಿಕಲ್ ಅಂಕಾಲಜಿಸ್ಟ್, ವೈದ್ಯರು ಹಾಗೂ ಫಾರ್ಮಾಸಿ ಅಧಿಕಾರಿಗಳು ಕಿಮೋಥೆರಪಿ ಕೇಂದ್ರಗಳಲ್ಲಿ ಇರುತ್ತಾರೆ. ರೋಗಿಗಳು ಹೆಚ್ಚಾಗುತ್ತಿದೆ, ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿದೆ. ಶೇಕಡಾ 60ರಷ್ಟು ರೋಗಿಗಳು ಬೆಂಗಳೂರು ನಗರ, ಹುಬ್ಬಳ್ಳಿ, ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಕಿಮೋಥೆರಪಿಗಾಗಿ 100 ಕಿ.ಮೀ. ದೂರು ಹೋಗಬೇಕು. ಲಾಜಿಸ್ಟಿಕ್ ಕಾರಣದಿಂದ ಹೆಚ್ಚಿನ ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ.

ಸಮಯ ಮತ್ತು ತೊಂದರೆ ಜೊತೆಗೆ ಖರ್ಚು ಹೆಚ್ಚಾಗುತ್ತಿದೆ. ಆದರೆ ಇನ್ಮುಂದೆ ಅಂತಹ ಸಮಸ್ಯೆಗಳು ಕಡಿಮೆ ಆಗಲಿದೆ. ಪ್ರತಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ 10 ಬೆಡ್ ಮೀಸಲು ಇಡುತ್ತೇವೆ. ಅದಕ್ಕೆ ಇಬ್ಬರು ನರ್ಸ್ ಗಳು ಇರುತ್ತಾರೆ. ಅಲ್ಲದೇ ಆಪ್ತ ಸಮಾಲೋಚನೆ, ಮೆಡಿಕಲ್ ಅಂಕಾಲಜಿಸ್ಟ್, ವೈದ್ಯರು ಹಾಗೂ ಫಾರ್ಮಾಸಿ ಅಧಿಕಾರಿಗಳು ಇರುತ್ತಾರೆ. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕಿಮೋಥೆರಪಿ ಸಿಗಲಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಕೇಂದ್ರೀಕೃತವಾಗಿದ್ದ ಕ್ಯಾನ್ಸರ್ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಮೂಲಕ ವಿಕೇಂದ್ರಿಕೃತ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾನ್ಸರ್ ಗೆ ತುತ್ತಾಗುತ್ತಿದ್ಧಾರೆ. ಪ್ರತಿ ವರ್ಷ 70 ಸಾವಿರ ಹೊಸ ರೋಗಿಗಳು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗಾಗಿ ಶೇ 60 ರಷ್ಟು ಕ್ಯಾನ್ಸರ್ ಪೀಡಿತರು 100 ಕಿ.ಮೀ ಗೂ ಹೆಚ್ಚು ದೂರ ಪ್ರಯಾಣ ಮಾಡಬೇಕಿತ್ತು. ಇದರಲ್ಲಿ ಶೇ 30 ರಷ್ಟು ಬಡ ರೋಗಿಗಳು ದೂರದ ಪ್ರಯಾಣದ ವೆಚ್ಚ ಭರಿಸಲಾಗದೇ ಕೀಮೋಥೆರಪಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಿಗೆ ಹೋಗುತ್ತಿರಲಿಲ್ಲ.. ಇದೀಗ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರದ ಕೀಮೋಥೆರಪಿ ಕೇಂದ್ರಗಳಲ್ಲಿ ಚಿಕಿತ್ಸೆ ದೊರಯಲಿದೆ. ಬಿಪಿಎಲ್ ಕುಟುಂಬಗಳಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲಾಗಿದೆ. ಇದು ಬಡವರಿಗೆ ಹೆಚ್ಚು ಅನುಕೂಲವಾಗುವ ಯೋಜನೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಉನ್ನತ ಮಟ್ಟದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಹಯೋಗದೊಂದಿಗೆ ಹಬ್ ಅಂಡ್ ಸ್ಪೋಕ್ ಮಾಡೆಲ್ ನಲ್ಲಿ ಜಾರಿಗೆ ತಂದಿದ್ದೇವೆ. 16 ಜಿಲ್ಲಾಸ್ಪತ್ರೆಗಳಲ್ಲಿ 7 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಹಯೋಗದೊಂದಿಗೆ ಕೀಮೋಥೆರಪಿ ಚಿಕಿತ್ಸೆ ಒದಗಿಸಲಾಗಿದೆ. ಕೀಮೋಥೆರಪಿ ಹೊರತಾಗಿ ಹೆಚ್ಚಿನ ಚಿಕಿತ್ಸೆಯನ್ನು ಹಬ್ ಕೇಂದ್ರಗಳಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಲ್ಪಿಸಿಕೊಡುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Previous Post

ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

Next Post

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ'ಸೋಜಾ ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026

Recent News

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved