ಮಂಗಳೂರು: ಮೇ 30: ಮನೆಯ ತಡೆಗೋಡೆ ಕುಸಿದು ಮನೆಯ ಕೊಠಡಿಯ ಕಿಟಕಿ ಮೇಲೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಲ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ
ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.