ಉಡುಪಿ: ಮೇ 31:ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಸಹಯೋಗದದಲ್ಲಿ ಆಯೋಜಿಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪ್ರತಿಭಾನ್ವಿತ ಸ್ಕೌಟ್ಸ್, ಗೈಡ್ಸ್ ರೋವರ್, ರೇಂಜರ್, ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮ ಮೇ 30 ರಂದು ಜರುಗಿತು
ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಸಾಧಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಸ
ಮಾರಂಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯದ ಮುಖ್ಯ ಆಯುಕ್ತರಾದ ಶ್ರೀ ಪಿ. ಜಿ. ಆರ್. ಸಿಂಧ್ಯ ಹಾಗೂ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಅಪರ ಜಿಲ್ಲಧಿಕಾರಿ ಶ್ರೀ ಅಬೀದ್ ಗದ್ಯಾಳ್, ಪ್ರಮುಖರಾದ ಶ್ರೀ ಜನಾರ್ಧನ ಕೊಡವೂರು ಮೊದಲಾದ ಗಣ್ಯರು ಉಪಸ್ಥಿತರಿದ್ದರು.