Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

Dhrishya News by Dhrishya News
06/06/2025
in ಸುದ್ದಿಗಳು
0
0
SHARES
41
VIEWS
Share on FacebookShare on Twitter

ಕುಂದಾಪುರ, ಜೂ. 06 : ಸಿದ್ದಾಪುರ ಅರಣ್ಯದಂಚಿನ ಗ್ರಾಮಗಳ ಜನರಲ್ಲಿ ಮೂರು ದಿನಗಳಿಂದ ಭಯ ಸೃಷ್ಟಿಸಿದ್ದ ಕಾಡಾನೆಯನ್ನು ಆರು ಕುಮ್ಕಿ ಆನೆಗಳು ಮತ್ತು 150 ಸದಸ್ಯರ ತಂಡದ ಕಾರ್ಯಾಚರಣೆಯ ಮೂಲಕ ಕೊನೆಗೂ ಸೆರೆಹಿಡಿಯಲಾಗಿದೆ.

ಸಿದ್ದಾಪುರ ಪೇಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಅಲೆದಾಡಿದ್ದ ಆನೆ, ಮೂರು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಇದರಿಂದಾಗಿ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಅಧಿಕಾರಿಗಳು ರಜೆ ಘೋಷಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸಂಜೆ 6:30 ರೊಳಗೆ ವ್ಯಾಪಾರ ಸಂಸ್ಥೆಗಳನ್ನು ಮುಚ್ಚುವಂತೆ ಆದೇಶಿಸಲಾಗಿತ್ತು.

 

ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ಇಟಿಎಫ್) ತಂಡದೊಂದಿಗೆ ಕುದುರೆಮುಖ ಮತ್ತು ಶಿವಮೊಗ್ಗ ವನ್ಯಜೀವಿ ವಿಭಾಗಗಳು, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಸಿದ್ದಾಪುರ, ಅಮಾಸೆಬೈಲು ಮತ್ತು ನಗರ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಹಾಗೂ ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳು ಭಾಗವಹಿಸಿದ್ದರು.

 

ಗುರುವಾರ ಮಧ್ಯಾಹ್ನ ಅರಣ್ಯ ಅಧಿಕಾರಿಗಳು ಆನೆಯ ಕತ್ತಿಗೆ ಅಳವಡಿಸಿದ್ದ ರೇಡಿಯೋ ಕಾಲರ್ ಬಳಸಿ ಅದನ್ನು ಟ್ರ‍್ಯಾಕ್ ಮಾಡಲು ಪ್ರಾರಂಭಿಸುವ ಮೂಲಕ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಸಂಜೆ 5:30 ರ ಹೊತ್ತಿಗೆ, ಸಕ್ರೆಬೈಲಿನ ಡಾ. ಕಲ್ಲಪ್ಪ, ಮಂಗಳೂರಿನ ಡಾ. ಯಶಸ್ವಿ, ಮತ್ತು ನಾಗರಹೊಳೆಯ ಡಾ. ರಮೇಶ್ ಎಂಬ ಪಶುವೈದ್ಯರು ಆನೆಗೆ ಅರಿವಳಿಕೆ ನೀಡಿದರು.

 

ಆನೆ 8-10 ನಿಮಿಷಗಳಲ್ಲಿ ಮಲಗುತ್ತದೆ ಎಂದು ನಿರೀಕ್ಷಿಸಲಾಗಿತ್ತಾದರೂ, ಅದು ಹೆನ್ನಾಬೈಲಿನ ಉರಪಾಲು ಬಳಿ ಕುಸಿದುಬೀಳುವ ಮೊದಲು ಸುಮಾರು 1.5 ಕಿಮೀ ಅರಣ್ಯದ ಆಳಕ್ಕೆ ಸಾಗಿತ್ತು. ನಾಗರಹೊಳೆಯ ಭೀಮ, ಮತ್ತು ಸಕ್ರೆಬೈಲಿನ ಬಹದ್ದೂರ್, ಬಾಲಚಂದ್ರ ಮತ್ತು ಸೋಮಣ್ಣ ಸೇರಿದಂತೆ ಕುಮ್ಕಿ ಆನೆಗಳನ್ನು ಕಾರ್ಯಾಚರಣೆಯಲ್ಲಿ ಬಳಸಲಾಯಿತು. ಸಾಕಾನೆಗಳು, ಮಾವುತರು, ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯರ ನೆರವಿನೊದಿಗೆ ಕೊನೆಗೂ ಕಾಡಾನೆಯನ್ನು ಹಿಡಿಯಲಾಯಿತು.

 

ಈ ಆನೆಯನ್ನು ಹಿಂದೆ ಹಾಸನದಲ್ಲಿ ಹಿಡಿದು ಮತ್ತೆ ಕಾಡಿಗೆ ರೇಡಿಯೋ ಕಾಲರ್ ಅಳವಡಿಸಿ ಬಿಡಲಾಗಿತ್ತು. ಇದೀಗ ಮತ್ತೆ ಸಿಕ್ಕಿರುವುದರಿಂದ ಸಕ್ರೆಬೈಲಿನ ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ.

 

ಎರಡು ದಿನಗಳಿಂದ ನಾಲ್ಕು ಇಟಿಎಫ್ ತಂಡಗಳು ಕಾರ್ಯಾಚರಣೆ ನಡೆಸಿದರೂ, ಆನೆ ಸೆರೆ ಸಿಗದೆ ತಪ್ಪಿಸಿಕೊಂಡಿತ್ತು. ಇದೀಗ ಅಂತಿಮವಾಗಿ 150 ಸಿಬ್ಬಂದಿಗಳು, 3 ಪಶುವೈದ್ಯರು ಹಾಗೂ 6 ಸಾಕಾನೆಗಳ ಕಾರ್ಯಾಚರಣೆ ಮೂಲಕ ಸಿದ್ದಾಪುರ ಸಮೀಪದ ಹೆನ್ನಾಬೈಲಿನ ಉರಪಾಲಿನ ಕಾಡಿನಲ್ಲಿ ಸೆರೆ ಹಿಡಿಯಲಾಗಿದೆ.

 

ಕಾರ್ಯಾಚರಣೆಗೆ ಅಡ್ಡಿಯಾಗದಿರಲಿ ಎಂದು ಸಿದ್ದಾಪುರ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತಗೊಳಿಸಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಆಟೋಗಳಲ್ಲಿ ಧ್ವನಿವರ್ಧಕಗಳನ್ನು ಕಟ್ಟಿಕೊಂಡು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರು. ಸಿದ್ದಾಪುರ-ಹೊಸಂಗಡಿ ರಾಜ್ಯ ಹೆದ್ದಾರಿಯನ್ನು ಮಧ್ಯಾಹ್ನ 3:30 ರಿಂದ ಸಂಜೆ 7:30 ರವರೆಗೆ ಸಂಪೂರ್ಣ ಬಂದ್ ಮಾಡಲಾಗಿತ್ತು.

 

‘ಸಾರ್ವಜನಿಕರಿಗೆ ಯಾವುದೇ ಹಾನಿಯಾಗದಂತೆ ಆನೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಈ ಪರಿಸರದಲ್ಲಿ ಭಯದ ವಾತಾವರಣ ಇದ್ದುದ್ದರಿಂದ ಮುಂಜಾಗ್ರತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಹಾಗೆಯೇ ಮುಂದೆಯೂ ಅಗತ್ಯ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ’ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

‘150 ಸಿಬ್ಬಂದಿ, ಮೂವರು ಪಶುವೈದ್ಯರು ಮತ್ತು ಆರು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಯಲ್ಲಿ ಬಳಸಲಾಗಿತ್ತು. ಉನ್ನತ ಅಧಿಕಾರಿಗಳ ನಿರ್ದೇಶನದಂತೆ ಆನೆಯನ್ನು ಸಕ್ರೆಬೈಲಿಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ’ ಎಂದು ಕುದುರೆಮುಖ ವನುಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮು ಬಾಬು ತಿಳಿಸಿದ್ದಾರೆ.

 

Previous Post

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

Next Post

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved