Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಾಹೆ ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ರತಿಧ್ವನಿಸಿದ ಪ್ಲಾಸ್ಟಿಕ್ ನಿರ್ಮೂಲನೆ ಮಹತ್ವ ..!!

Dhrishya News by Dhrishya News
07/06/2025
in ಮುಖಪುಟ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಮಣಿಪಾಲ, ಜೂನ್ 7 2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ಕ್ಯಾಂಪಸ್‌ನಲ್ಲಿ ಚಿಂತನಶೀಲ ಮತ್ತು ಸಮುದಾಯದ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ 2025ರ ವಿಶ್ವ ಪರಿಸರ ದಿನವನ್ನು ಜೂನ್ 05ರಂದು ಆಚರಿಸಿತು.

ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸುವ ವಿದ್ಯಾರ್ಥಿಗಳ ಜಾಥಾವನ್ನು ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು ಉದ್ಘಾಟಿಸುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.  ಉಡುಪಿ ಮತ್ತು ಮಣಿಪಾಲದಲ್ಲಿರುವ ವಿವಿಧ ಶಾಲೆಗಳ ನೂರಾರು ಮಕ್ಕಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. 

ಈ ಸಂದರ್ಭದಲ್ಲಿ ಮಾತನಾಡಿದ ಮಾಹೆಯ ಪ್ರೊ ಚಾನ್ಸೆಲರ್ ಡಾ. ಎಚ್.ಎಸ್. ಬಲ್ಲಾಳ್, “ಶಿಕ್ಷಣ ನೀಡುವವರಾಗಿ, ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಲ್ಲಿ ಮಾದರಿಯಾಗಿರಬೇಕಿರುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ. ನಿಜವಾದ ಪ್ರಗತಿಯು ಹೊಸತನದಲ್ಲಷ್ಟೇ ಇಲ್ಲ, ಬದಲಾಗಿ ಯಾವುದು  ನಮ್ಮನ್ನು ಪೋಷಿಸುತ್ತದೆ ಅದನ್ನು ಕಾಪಾಡಿಕೊಳ್ಳುವ ಚತುರತೆಯಲ್ಲಿದೆ ಎಂದು ನಂಬಲಾಗಿದೆ. ಪರಿಸರ ಜವಾಬ್ದಾರಿಯು ಮಾಹೆಯ ಅವಿಭಾಜ್ಯ ಅಂಗವಾಗಿದೆ. ಕೇವಲ ಚಿಂತನೆಯಲ್ಲಿ ಮಾತ್ರವಲ್ಲ, ಕ್ರಿಯೆಯಲ್ಲೂ ಸಹ. ನಮ್ಮ ಭೂಮಿಯ ಆರೋಗ್ಯವು ನಮ್ಮ ಭವಿಷ್ಯದ ಪೀಳಿಗೆಯ ಯೋಗಕ್ಷೇಮದೊಂದಿಗೆ ಪರಸ್ಪರ ನಂಟಿದೆ. ನಾವು ಅದರ ಭಾಗವಾಗಿರುವಂತೆಯೇ ಪರಿಸರವು ನಮ್ಮ ಅವಿಭಾಜ್ಯ ಅಂಗವಾಗಿದೆ’’ ಎಂದರು. ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಯುವ ಪೀಳಿಗೆ ವಹಿಸಿಕೊಳ್ಳುವ ಮಹತ್ವವನ್ನು ಅವರು ಒತ್ತಿ ಹೇಳಿದರು.

ಮಾಹೆಯ ತಂತ್ರಜ್ಞಾನ ಮತ್ತು ವಿಜ್ಞಾನ ಪ್ರೊ- ವೈಸ್ ಚಾನ್ಸೆಲರ್ ಡಾ. ನಾರಾಯಣ ಸಭಾಹಿತ್, ಶೈಕ್ಷಣಿಕ, ಕಾರ್ಯಾಚರಣೆಗಳು ಮತ್ತು ಪ್ರಭಾವ ಬೀರುವ ಹೆಜ್ಜೆಗಳಲ್ಲಿ ಸುಸ್ಥಿರತೆಯ ಅಭ್ಯಾಸಗಳನ್ನು ಒಳಗೊಳ್ಳುವ ಮಾಹೆಯ ದೃಷ್ಟಿಕೋನವನ್ನು ಪ್ರಸ್ತುತ ಪಡಿಸಿದರು. ಎಂದರು. ಇದೇ ವೇಳೆ ಮಾತನಾಡಿದ, ಆರೋಗ್ಯ ವಿಜ್ಞಾನಗಳ ಪ್ರೊ- ವೈಸ್ ಚಾನ್ಸೆಲರ್ ಡಾ. ಶರತ್ ಕುಮಾರ್ ರಾವ್ ಕೆ, ನೀರು, ಗಾಳಿ ಮತ್ತು ಭೂಮಿಯನ್ನು ಮಾಲಿನ್ಯದಿಂದ ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಉಡುಪಿಯ ಟಿ.ಎ. ಪೈ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಕೆ.ಎಸ್. ಅವನೀಶ್ ಮತ್ತು ಮಣಿಪಾಲದ ಮಾಧವ ಕೃಪಾ ಶಾಲೆಯ ಸಮೀಕ್ಷಾ ನಾಯಕ್ ಅವರು ಒಂದು ಬಾರಿ ಬಳಸಿ ಬಿಸಾಕುವ ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ಆಗುತ್ತಿರುವ ಪರಿಣಾಮಗಳ ಕುರಿತು ಸ್ಪೂರ್ತಿದಾಯಕ ಭಾಷಣ ಮಾಡಿದರು.  

ಮಾಹೆ ಮುಖ್ಯ ಕಾರ್ಯಾಚರಣಾ ಅಧಿಕಾರಿ ಡಾ. ರವಿರಾಜ ಎನ್.ಎಸ್, ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡುವ ಮೂಲಕ ಪರಿಸರವನ್ನು ಸಂರಕ್ಷಿಸುವ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 

ಕ್ಯಾಂಪಸ್‌ನಲ್ಲಿ ಸಂಗ್ರಹಿಸಿದ ಮರುಬಳಕೆಯ ಪ್ಲಾಸ್ಟಿಕ್ ನೀರಿನ ಬಾಟಲಿಗಳಿಂದ ರೂಪಿಸಲಾದ ನಾಲ್ಕು ಬೆಂಚುಗಳು ಗಮನ ಸೆಳೆದವು. ಮಾಹೆ ರಿಜಿಸ್ಟ್ರಾರ್ ಡಾ. ಪಿ. ಗಿರಿಧರ್ ಕಿಣಿ ಮತ್ತು ಮುಖ್ಯ ಕಾರ್ಯಾಚರಣಾ ಅಧಿಕಾರಿ ಡಾ. ಆನಂದ್ ವೇಣುಗೋಪಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅನಿಲ್ ಭಟ್ ಸ್ವಾಗತಿಸಿದರು. ಮಾಹೆ  ಎಸ್ಟೇಟ್ ಅಧಿಕಾರಿ ಶ್ರೀ ಬಾಲಕೃಷ್ಣ ಪ್ರಭು ಧನ್ಯವಾದ ಅರ್ಪಿಸಿದರು.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಕುರಿತು:

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಶ್ರೇಷ್ಠ ಸಂಸ್ಥೆಯಾಗಿದ್ದು, (Institution of Excellence Deemed to be University). ಮಾಹೆಯು ಮಣಿಪಾಲ್, ಮಂಗಳೂರು, ಬೆಂಗಳೂರು, ಜಮ್ಶೆಡ್‌ಪುರ ಮತ್ತು ದುಬೈನಲ್ಲಿ ತನ್ನ ಕ್ಯಾಂಪಸ್‌ಗಳನ್ನು ಹೊಂದಿದೆ.  ಆರೋಗ್ಯ ವಿಜ್ಞಾನ (HS), ಮ್ಯಾನೇಜ್ಮೆಂಟ್, ಕಾನೂನು, ಮಾನವಿಕ ಮತ್ತು ಸಮಾಜ ವಿಜ್ಞಾನ (MLHS), ತಂತ್ರಜ್ಞಾನ ಮತ್ತು ವಿಜ್ಞಾನ (T&S) ವಿಭಾಗಗಳಲ್ಲಿ 400ಕ್ಕೂ ಹೆಚ್ಚು ವಿಶೇಷ ಕೋರ್ಸ್ ಗಳನ್ನು  ಹೊಂದಿದೆ.  ಉತ್ತಮ ಶೈಕ್ಷಣಿಕ ದಾಖಲೆ, ಅತ್ಯಾಧುನಿಕ ಮೂಲಸೌಕರ್ಯ ಮತ್ತು ಗಮನಾರ್ಹ ಸಂಶೋಧನಾ ಕೊಡುಗೆಗಳೊಂದಿಗೆ, ಮಾಹೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಮತ್ತು ಮೆಚ್ಚುಗೆಯನ್ನು ಗಳಿಸಿದೆ. ಅಕ್ಟೋಬರ್ 2020ರಲ್ಲಿ, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಮಾಹೆಗೆ ‘ಪ್ರತಿಷ್ಠಿತ ಸಂಸ್ಥೆ’ ಎನ್ನುವ ಉನ್ನತ ಸ್ಥಾನಮಾನ ನೀಡಿದೆ. ಪ್ರಸ್ತುತ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿಯಲ್ಲಿ (NIRF) 4ನೇ ಸ್ಥಾನದಲ್ಲಿದೆ, ಒಳ್ಳೆಯ ಕಲಿಕೆ ಅನುಭವ, ಸುಂದರ ಕ್ಯಾಂಪಸ್ ಬಯಸುವ ವಿದ್ಯಾರ್ಥಿಗಳಿಗೆ ಹಾಗು ಪ್ರತಿಭಾನ್ವಿತರನ್ನು ಪ್ರತಿಭೆಯನ್ನು ಹುಡುಕುತ್ತಿರುವ ರಾಷ್ಟ್ರೀಯ ಮತ್ತು ಬಹುರಾಷ್ಟ್ರೀಯ ಕಾರ್ಪೊರೇಟ್‌ಗಳಿಗೆ ಮಾಹೆಯು ಆದ್ಯತೆಯ ಆಯ್ಕೆಯಾಗಿದೆ.

Previous Post

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

Next Post

ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026