ಉಡುಪಿ:ಜೂನ್ 14:ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ
ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ. ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ:15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಉಲ್ಲೇಖ(1)ರ ಪತ್ರದಲ್ಲಿ ಕೋರಲಾಗಿದೆ.ಈ ವಿಚಾರದಲ್ಲಿ ಉಲ್ಲೇಖ(2)ರಂತೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯಲಾಗಿರುತ್ತದೆ.
ಸದರಿಯವರ ಕೋರಿಕೆ ಹಾಗೂ ಪೊಲೀಸ್ ಇಲಾಖಾ ವರದಿಯನ್ವಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ) (2) & (5) ರನ್ಮಯ, ರಾಷ್ಟ್ರೀಯ ಹೆದ್ದಾರಿ 1692 20:15-06-2025 ໖໐໖ 30-09-2025 ಸಂಚಾರಕ್ಕೆ ಮಾತ್ರ ಅನುವು ಮಾಡಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿದೆ.
ಭಾರಿ ವಾಹನಗಳು ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ
ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವಂತ ಭಾರಿ ವಾಹನಗಳು ಉಡುಪಿ-ಕುಂದಾಪುರ ಸಿದ್ಯಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ.
ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟೆ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.