ಉಡುಪಿ :ಜೂನ್ 17:ಉಡುಪಿಯ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಇವರು ಬೆಂಗಳೂರಿನ ಇ-ಆಡಳಿತ, ಆರ್‌ಡಿಪಿಆರ್ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಹಾಗೆಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕೂಡ ವರ್ಗಾವಣೆ ಆಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.