Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ..!!

Dhrishya News by Dhrishya News
19/06/2025
in ಸುದ್ದಿಗಳು
0
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!
0
SHARES
15
VIEWS
Share on FacebookShare on Twitter

ಉಡುಪಿ: ಜೂನ್ 17:ದೇಶದಲ್ಲಿ ಒಂದು ಒಳ್ಳೆಯ ಸರಕಾರ ಆಡಳಿತದಲ್ಲಿದ್ದಾಗ ದೇಶ ಹೇಗೆ ಉತ್ತಮ ಪ್ರಗತಿಯೊಂದಿಗೆ ಸಾಧನೆಯ ಉತ್ತುಂಗಕ್ಕೇರಲು ಸಾಧ್ಯವಾಗುತ್ತದೆ ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ವಿಕಸಿತ ಭಾರತ ಅಭಿಯಾನದ ವಿಭಾಗ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ ಹೇಳಿದರು.

ಅವರು ಅವರು ಕಡಿಯಾಳಿಯ ಹೋಟೆಲ್ ಒಷಿಯನ್ ಪರ್ಲ್ ಸಭಾಂಗಣದಲ್ಲಿ ‘ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’ ವಿಷಯದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಹಿಂದೆ ಹಲವಾರು ಸರಕಾರಗಳನ್ನು ಕಂಡಿದ್ದೇವೆ. ಅದಕ್ಕಿಂತ ಮೋದಿ ನೇತೃತ್ವದ ಕೇಂದ್ರ ಸರಕಾರ ಹೇಗೆ ವಿಭಿನ್ನವಾಗಿದೆ ಎನ್ನುವುದನ್ನು 11 ವರ್ಷಗಳ ಆಡಳಿತದಲ್ಲಿ ಮಾಡಿದ ಸಾಧನೆಗಳ ಕೆಲವು ಅಂಕಿ ಅಂಶಗಳ ಮೂಲಕ ಉಲ್ಲೇಖಿಸಬಹುದು.

ಕಳೆದ 11 ವರ್ಷಗಳಲ್ಲಿ ಕೋಟ್ಯಾಂತರ ಕುಟುಂಬಗಳು ಮೊದಲ ಬಾರಿ ಕೆಲವು ಮೂಲಭೂತ ಸೌಲಭ್ಯವನ್ನು ಪಡೆದುಕೊಂಡವು.

55.22 ಕೋಟಿ ಜನಧನ್ ಖಾತೆಗಳು, ಪ್ರಧಾನಮಂತ್ರಿ ಅವಾಜ್ ಯೋಜನೆಯಲ್ಲಿ 4 ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ, 12 ಕೋಟಿ ಶೌಚಾಲಯಗಳ ನಿರ್ಮಾಣ, 81 ಕೋಟಿ ಜನತೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ, 10.33 ಕೋಟಿ ಜನತೆಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ, 52.5 ಕೋಟಿ ಜನತೆಗೆ ಮುದ್ರಾ ಸಾಲ ಯೋಜನೆ ಸಾಲ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 11 ಕೋಟಿ ರೈತರಿಗೆ ಪ್ರತೀ ವರ್ಷ 6000 ರೂಪಾಯಿ ನಗದು ವರ್ಗಾವಣೆ, 40 ಕೋಟಿ ಜನತೆಗೆ ಪ್ರಧಾನ ಮಂತ್ರಿ ಆಯುಷ್ಮಾನ್‌ ಕಾರ್ಡ್ ಯೋಜನೆ ಹಾಗೂ ಪ್ರಸಕ್ತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಯೋಜನೆ ಮುಂತಾದ ಹಲವಾರು ಸೌಲಭ್ಯಗಳೊಂದಿಗೆ ಬಿಜೆಪಿಯ ಸರ್ವವ್ಯಾಪಿ, ಸರ್ವಸ್ಪರ್ಶಿ ಸಂಕಲ್ಪ ಸಾಕಾರಗೊಂಡಿದೆ. ಸುಸಜ್ಜಿತ ಭದ್ರತಾ ವ್ಯವಸ್ಥೆಯ ಜೊತೆಗೆ ಸದೃಢ ಆರ್ಥಿಕತೆಯಲ್ಲಿ ವಿಶ್ವದಲ್ಲಿ 4ನೇ ಸ್ಥಾನಕ್ಕೇರುವ ಮೂಲಕ ಭಾರತಕ್ಕೆ ವಿಶ್ವ ಮನ್ನಣೆ ದೊರೆತಿದೆ ಎಂದು ಉದಯ ಕುಮಾರ್ ಶೆಟ್ಟಿ ತಿಳಿಸಿದರು.

ಈ ಸಂದರ್ಭದಲ್ಲಿ ವಿಕಸಿತ ಭಾರತ ಅಭಿಯಾನದ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಅಭಿಯಾನದ ಜಿಲ್ಲಾ ಸಹ ಸಂಚಾಲಕರಾದ ಸಂಧ್ಯಾ ರಮೇಶ್, ದಿಲೇಶ್ ಶೆಟ್ಟಿ, ಜಿಲ್ಲಾ ವಕ್ತಾರರಾದ ಗೀತಾಂಜಲಿ ಎಮ್. ಸುವರ್ಣ, ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.

Previous Post

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

Next Post

ಜೂನ್೨೧ ಶ್ರೀ ಕೃಷ್ಣ ಮಠದಲ್ಲಿ ವೈಶಿಷ್ತ್ಯಪೂರ್ಣ ಯೋಗ ದಿನಾಚರಣೆ..!!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೂನ್೨೧ ಶ್ರೀ ಕೃಷ್ಣ ಮಠದಲ್ಲಿ ವೈಶಿಷ್ತ್ಯಪೂರ್ಣ ಯೋಗ ದಿನಾಚರಣೆ..!!!!

ಜೂನ್೨೧ ಶ್ರೀ ಕೃಷ್ಣ ಮಠದಲ್ಲಿ ವೈಶಿಷ್ತ್ಯಪೂರ್ಣ ಯೋಗ ದಿನಾಚರಣೆ..!!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News