ಬೆಂಗಳೂರು, ಜೂನ್ 20:ನೆಲಮಂಗಲ ಬಳಿಯ ನಗರೂರು ಬಿಜಿಎಸ್ ಕಾಲೇಜು ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದು ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು
ಅವರನ್ನು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾದ ಬಿಎಸ್ ಯಡಿಯೂರಪ್ಪನವರು,ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ವಿಧಾನಸಭೆಯ ವಿಪಕ್ಷ ನಾಯಕರಾದ ಆರ್ ಅಶೋಕ್, ವಿಧಾನ ಪರಿಷತ್ತಿನ ಸದಸ್ಯರ ಸಿಟಿ ರವಿ, ಸಂಸದರಾದ ಪಿ ಸಿ ಮೋಹನ್, ಡಾಕ್ಟರ್ ಮಂಜುನಾಥ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎನ್ ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪ್ರಭು ಚೌಹಾಣ್ ಹಾಗೂ ಪ್ರಮುಖರು ಸ್ವಾಗತಿಸಿದರು