ಉಡುಪಿ : ಜೂನ್ 20:ಉಡುಪಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇದರ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಅನುಮೋದನೆಗೊಂಡ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಜೂನ್ 20ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ ನೆರವೇರಿಸಿದರು.
ಈ ವೇಳೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯಧಿಕಾರಿ ಡಾ. ಬಸವರಾಜ,ಉಡುಪಿ ನಗರಸಭೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.