ಉಡುಪಿ: ಜೂನ್ 22:ಕಾಪು ಪುರಸಭೆಯ ಬಳಿ ನಿರ್ಮಿಸಿರುವ “ಇಂದಿರಾ ಕ್ಯಾಂಟೀನ್ ಕಟ್ಟಡ”ವನ್ನು ಜೂನ್ 21ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ.ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ,ವಿನಯ್ ಕುಮಾರ್ ಸೊರಕೆ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ,ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.