ಉಡುಪಿ: ಜೂನ್ 24: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. . ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಇಂದಿನಿಂದ ಜೂ.29ರವರೆಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.