ಮಂಗಳೂರು ಜೂನ್ 25: ಬೇರೆ ಬೇರೆ ಆಯಪ್‌ಗಳಲ್ಲಿ ಸಾಲ ಪಡೆದಿದ್ದು ಕಿರುಕುಳ ತಾಳಲಾರದೆ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ.
ಮೃತರನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಜೂನ್ 24 ರಂದು ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದರು,ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ ಫೋನ್ ಕರೆ ಸ್ವೀಕರಿಸಿರಲಿಲ್ಲ. ಹಾಗಾಗಿ ರಾತ್ರಿ 8:15ರ ವೇಳೆಗೆ ಬಾಗಿಲಿನ ಎಡೆಯಿಂದ ಗಮನಿಸಿದಾಗ ನಿಖಿಲ್ ಆತ್ಮಹತ್ಯೆ ಮಾಡಿರುವ ಬಗ್ಗೆ ಅನುಮಾನ ಬಂದಿದೆ ಕೂಡಲೇ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ
ಹಲವಾರು ಆಯಪ್ ಮೂಲಕ ನಿಖಿಲ್ ಸಾಲ ಪಡೆದಿದ್ದು, ಇದರಿಂದ ಆರ್ಥಿಕ ಸಮಸ್ಯೆಗೊಳಗಾಗಿದ್ದರು. ತಾಯಿಗೆ ಆರೋಗ್ಯ ಸರಿಯಿಲ್ಲವೆಂದು ಒಂದು ವಾರದಿಂದ ಕೆಲಸಕ್ಕೂ ರಜೆ ಹಾಕಿದ್ದರು ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.