ಮಂಗಳೂರು:ಜೂನ್ 26 :ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನೆಲೆ ಗಿರಿದರ್ ಅವರ ಪತ್ನಿ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತಂತೆ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.
ಗುರುವಾರ ಬೆಳಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ, ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂಬ ಮಾಹಿತಿ ಲಭ್ಯ ವಾಗಿದೆ