Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಧರ್ಮಸ್ಥಳದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ : 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ..!!

Dhrishya News by Dhrishya News
04/05/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಧರ್ಮಸ್ಥಳ: ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆದ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.

ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ದರ್ಶನ್ ತೂಗುದೀಪ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ಮಂಗಲಸೂತ್ರವನ್ನು ವಿತರಿಸಿದರು.6.40ರ ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವೇದ, ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಲಸೂತ್ರ ಧಾರಣೆ ಮಾಡಿ, ಆಯಾ ಜಾತಿ ಸಂಪ್ರದಾಯದಂತೆ ಮದುವೆಯ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

ಧರ್ಮಸ್ಥಳದಲ್ಲಿ ಮಂಗಲ ಮುಹೂರ್ತದಲ್ಲಿ ವಧು-ವರರು ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಕೇರಳದಿಂದ ಮೂರು ಜೊತೆ ಹಾಗೂ ಆಂಧ್ರಪ್ರದೇಶದ ಒಂದು ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾದರು.ನೂತನ ದಂಪತಿಗಳು ಸಾರ್ಥಕ ಜೀವನ ನಡೆಸಿ : ಡಿ. ವೀರೇಂದ್ರ ಹೆಗ್ಗಡೆ ಮದುವೆಯಾಗಿ ಬಂದ ಗೃಹಿಣಿ ಭಾಗ್ಯಲಕ್ಷ್ಮಿಯಾಗಿ ಮನೆಯನ್ನೇ ಬೆಳಗಿ ಸ್ವರ್ಗವನ್ನಾಗಿ ಮಾಡುತ್ತಾಳೆ. ಪತಿ-ಪತ್ನಿ ಪರಸ್ಪರ ಹೊಂದಾಣಿಕೆ, ತಾಳ್ಮೆ ಮತ್ತು ಸಹನೆಯಿಂದ ಸುಖ-ಕಷ್ಟವನ್ನು ಸಮಾನವಾಗಿ ಸ್ವೀಕರಿಸಿ ಅನುಭವಿಸಿ, ಸಾರ್ಥಕ ದಾಂಪತ್ಯ ಜೀವನ ನಡೆಸಬೇಕು. ಆಗ ಮನೆಯೇ ಮಂದಿರವಾಗುತ್ತದೆ. ಸ್ವರ್ಗ ಸುಖವನ್ನು ಅನುಭವಿಸಬಹುದು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೂತನ ದಂಪತಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು. ಚಲನಚಿತ್ರ ನಟ ದರ್ಶನ್ ತೂಗುದೀಪ್ ಮಾತನಾಡಿದರು.

ಹೇಮಾವತಿ ವಿ. ಹೆಗ್ಗಡೆ, ಶ್ರದ್ಧಾ ಅಮಿತ್, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್. ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರುತಾಜಿತೇಶ್ ಮತ್ತು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಧನ್ಯವಾದವಿತ್ತರು. ದಿವ್ಯ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು

Previous Post

ಬಾಳಿಗಾ ಫಿಶ್ ನೆಟ್ಸ್ ಉಡುಪಿಯಲ್ಲಿ ಉದ್ಯೋಗಾವಕಾಶ…!!

Next Post

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ-ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಶುಭದರಾವ್ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ-ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಶುಭದರಾವ್ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check