ಚಾಮರಾಜನಗರ, ಜೂನ್ 28: ಐದು ಹುಲಿಗಳ ನಿಗೂಢ ಸಾವಿನ ಬೆನ್ನಲ್ಲೇ ಇದೀಗ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ.
4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಇಂದು ವೈದ್ಯರು ಹುಲಿ ಮರಣೋತ್ತರ ಪರೀಕ್ಷೆ ನಡೆಸಲಿದ್ದು ಹೆಚ್ಚಿನ ಮಾಹಿತಿ ಲಭ್ಯ ವಾಗಬೇಕಿದೆ