ಉಡುಪಿ:ಜೂನ್ 28: ಕರಾವಳಿ ಬಾಗದಲ್ಲಿ ಜೂ.28 ಮತ್ತು 29ರಂದು ರಭಸವಾದ ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ
ಉಡುಪಿ ಜಿಲ್ಲಾದ್ಯಂತ ಶುಕ್ರವಾರ ಆರೆಂಜ್ ಅಲರ್ಟ್ ಘೋಷಣೆ ಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿದಿಲ್ಲ. ಉಡುಪಿ ನಗರ ಸಹಿತ ಸುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.
ಬೈಂದೂರು, ಕುಂದಾಪುರ ಭಾಗದಲ್ಲಿ ಹೆಚ್ಚು ಮಳೆ ಇರಲಿಲ್ಲ. ಕಾರ್ಕಳ, ಕಾಪು, ಬ್ರಹ್ಮಾವರ, ಹೆಬ್ರಿ ಮೊದಲಾದ ಭಾಗದಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಬಿಟ್ಟು ಬಿಟ್ಟು ಮಳೆಯಾಗಿದ್ದು ಮೋಡಕವಿದ ವಾತಾವರಣ ಮುಂದುವರಿದಿತ್ತು.