ಉಡುಪಿ: ಜುಲೈ 02: ಬೆಳಿಗ್ಗೆಯಿಂದಲೇ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ವಿವಿದೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 3 ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಮತ್ತಷ್ಟು ದಿನಗಳಿಗೆ ಮಳೆ ವ್ಯಾಪಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಉತ್ತರ ಕನ್ನಡ, ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.