ಉಡುಪಿ:ಜುಲೈ 05:ದ.ಕ. ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ ನೇತೃತ್ವದಲ್ಲಿ ಮತ್ತು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಹೃದಯಿ ಭಕ್ತಾಭಿಮಾನಿಗಳ ಸಹಕಾರ-ಸಹಯೋಗದೊಂದಿಗೆ ಕಳೆದ ಬಾರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ”ಉಡುಪಿ ಉಚ್ಚಿಲ ದಸರಾ-“ವಿಶ್ವದಾದ್ಯಂತ ಪ್ರಖ್ಯಾತಿಗೊಂಡಿದ್ದು ತಮಗೆಲ್ಲರಿಗೂ ತಿಳಿದ ವಿಚಾರ. ಈ ಬಾರಿ 4 ನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವವು ದಿನಾಂಕ 22-09.2025 ರಿಂದ 02-10-2025ರವರೆಗೆ ನಡೆಯಲ್ಲಿದ್ದು ಸದ್ರಿ ಉತ್ಸವದ ರೂಪುರೇಷೆಗಳ ಬಗ್ಗೆ ಚರ್ಚಿಸಲು ದಿನಾಂಕ:06-07-2025,ಆದಿತ್ಯವಾರ,ಅಪರಾಹ್ನ 3.00ಕ್ಕೆ ಉಚ್ಚಿಲದ ಮೊಗವೀರ ಭವನದಲ್ಲಿ ಸಭೆ ನಡೆಸಲು ನಿರ್ಣಯಿಸಲಾಗಿದೆ.
ಈ ಪ್ರಯುಕ್ತ ಎಲ್ಲಾ ಸಹೃದಯಿ ಭಕ್ತರು,ಸಮಿತಿಯ ಸರ್ವ ಸದಸ್ಯರು,ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ಮೀನುಗಾರಿಕಾ ಸಂಘಟನೆಯ ಸದಸ್ಯರು, ಮಹಿಳೆಯರು,ಸೇರಿದಂತೆ ಎಲ್ಲಾ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಸದ್ರಿ ಸಭೆಯಲ್ಲಿ ಭಾಗವಹಿಸಿ ಈ ಬಾರಿಯ “ಉಡುಪಿ ಉಚ್ಚಿಲ ದಸರಾ-2025 ಉತ್ಸವವನ್ನು ಶಿಸ್ತುಬದ್ಧವಾಗಿ ಹಾಗೂ ಆಕರ್ಷಕವಾಗಿ ಆಚರಿಸಲು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಕ್ಷೇತ್ರದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದೆ