ಉಡುಪಿ: ಜುಲೈ 05:ಉಡುಪಿಯ ರಥಬೀದಿಯ ಸಮೀಪ ನಿರ್ಮಿಸಿರುವ ಶ್ರೀ ಸುಬ್ರಹ್ಮಣ್ಯ ಮಠದ ಶಾಖಾಮಠ *ಅನಂತ ಶ್ರೀ* ಭವನವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರು ದೀಪ ಪ್ರಜ್ವಲಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರು ಹಾಗೂ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀ ಪಾದರು ಉಪಸ್ಥಿತರಿದ್ದರು.