ಪುತ್ತೂರು ಜುಲೈ 06: ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ಮಗುವಾದ ನಂತರ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಬಂಧಿಸಿದ್ದಾರೆ.
ತನ್ನ ಮಗನನ್ನು ಪರಾರಿಯಾಗಲು ಸಹಕರಿಸಿದ ಆರೋಪದಡಿ ಆರೋಪಿಯ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ನನ್ನು ಬಂಧಿಸಲಾಗಿದೆ. ಇದೀಗ ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಕೃಷ್ಣ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.