ಉಡುಪಿ : ಜುಲೈ 07:ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ, ಕುಂದಾಪುರ, ಉಡುಪಿ ತಾಲ್ಲೂಕುಗಳಲ್ಲಿ ಪ್ರತಿಭಟನೆ ಆಯೋಜಿಸಿದ್ದು, ಅದರಂತೆ ಇದೇ 7ರಂದು ಸಂಜೆ 4 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಾವಣಗೆರೆಯ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಅವರು ಎರಡು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಭಾನುವಾರ ಆದೇಶಿಸಿದ್ದಾರೆ
ಈ ಕಾರ್ಯಕ್ರಮಕ್ಕೆ ಬರುವ ಭಾಷಣಗಾರರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಪ್ರಮುಖ ಭಾಷಣಗಾರರನ್ನಾಗಿ ರೌಡಿ ಶೀಟರ್ ಸತೀಶ್ ಪೂಜಾರಿ ಅವರನ್ನು ರಹಸ್ಯವಾಗಿ ಕರೆಸಿ ಸಮಾಜದ ಸ್ವಾಸ್ಥ್ಯ ಕದಡುವ ಸಾಧ್ಯತೆ ಇರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.