Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

Dhrishya News by Dhrishya News
10/07/2025
in ಸುದ್ದಿಗಳು
0
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!
0
SHARES
12
VIEWS
Share on FacebookShare on Twitter

ಕಾರ್ಕಳ: ಜುಲೈ 10:ಇಲ್ಲಿನ ಕ್ರೈಸ್ತಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪತ್ರಕರ್ತ ಬಿಪಿನ್‌ಚಂದ್ರ ಪಾಲ್, ನಕ್ರೆ ಅವರು ಆಗಮಿಸಿದ್ದರು. ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ, ಪತ್ರಿಕೆಗೆ ಹಾಗೂ ಪತ್ರಕರ್ತರಿಗೆ ಪತ್ರಿಕಾ ಧರ್ಮವೇ ಧರ್ಮವಾಗಬೇಕು. ಆಧುನಿಕ ಕಾಲದಲ್ಲಿ ಪತ್ರಕರ್ತರ ಕಾರ್ಯ ಅನೇಕ ಸವಾಲುಗಳಿಂದ ಕೂಡಿದೆ. ಆದರೆ ಅವುಗಳಿಗೆ ಹೆದರದೆ ನೇರ ಹಾಗೂ ದಿಟ್ಟತನದಿಂದ ವರದಿಗಾರಿಕೆ ಮಾಡಬೇಕು. ಪತ್ರಕರ್ತರು ಎಲ್ಲರವರಾಗಿರಬೇಕು ಹೊರತು ಯಾರೋ ಒಬ್ಬ ವ್ಯಕ್ತಿಯವನಾಗಿರಬಾರದು” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ತಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ “ಈ ಸಮಾಜದಲ್ಲಿ ಧ್ವನಿಯಿಲ್ಲದವರ ಧ್ವನಿಯಾಗಿರುವವರು ಪತ್ರಕರ್ತರು. ಇಂದಿನ ಸಂಕೀರ್ಣ ಸಮಾಜದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಭರಾಟೆಯ ನಡುವಿನಲ್ಲಿ ಪತ್ರಿಕೆಗಳು ಇಂದಿಗೂ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ. ದೇಶದಲ್ಲಿರುವ ಪ್ರಜೆಗಳಿಗೆ ಸೇವೆ ಸಲ್ಲಿಸುವುದೇ ದೇಶಪ್ರೇಮ. ಈ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದು ನಿಜವಾಗಿಯೂ ಅವರು ಅಭಿನಂದನಾರ್ಹರು” ಎಂದು ಹೇಳಿದರು. ಇನ್ನೋರ್ವ ಅತಿಥಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಮ್ಮದ್ ಷರೀಫ್ ಅವರು ಮಾತನಾಡಿ “ ಪತ್ರಕರ್ತರು ಸುದ್ದಿಯ ಬಗ್ಗೆ ಸಮಗ್ರ ವಸ್ತುನಿಷ್ಟ ಮಾಹಿತಿ ಸಂಗ್ರಹಿಸಿ ವಿಶ್ಲೇಷಿಸಿ ವರದಿ ಮಾಡಬೇಕು. ರಾಗ ದ್ವೇಷ ಪಕ್ಷಪಾತಗಳಿಲ್ಲದೆ ಪತ್ರಿಕಾ ಧರ್ಮ ಹಳಿ ತಪ್ಪದಂತೆ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮಬಿಂಬ ಪತ್ರಿಕೆಯ ಹಿರಿಯ ವರದಿಗಾರ ಸತೀಶ ಎಚ್ ಶೆಟ್ಟಿ ಅವರನ್ನು ಕ್ರೈಸ್ತಕಿಂಗ್ ಎಜುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಸತೀಶ ಶೆಟ್ಟಿ ಅವರು ತಮ್ಮ ವರದಿಗಾರಿಕೆಯ ಅನುಭವವನ್ನು ಹಂಚಿಕೊoಡರು. ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಲಕ್ಷಿ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಚಾನಲ್‌ನ ವಸಂತ್ ಕುಮಾರ್, ನಿವೃತ್ತ ಪತ್ರಕರ್ತರಾದ ಪ್ರದೀಪ್ ನಾಯಕ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಖ್ಯಾಶಾಸ್ತ ಉಪನ್ಯಾಸಕಿ ಮೇಘಶ್ರೀ ವಂದಿಸಿದರು.

Previous Post

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

Next Post

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check